ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಿ : ಧನಂಜಯ ಮಾಲಗಿತ್ತಿ

0
tahasildar
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ ಚುನಾವಣಾ ಕೆಲಸ ಕಾರ್ಯಗಳನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ 24*7 ಅವಧಿಯಲ್ಲಿ ಮುಂಡರಗಿ ತಾಲೂಕಿನ ಅಧಿಕಾರಿಗಳು, ನೌಕರರು ಕರ್ತವ್ಯ ನಿರ್ವಹಿಸುವಂತೆ ಮುಂಡರಗಿ ತಹಸೀಲ್ದಾರ ಧನಂಜಯ ಮಾಲಗಿತ್ತಿ ಸೂಚಿಸಿದ್ದಾರೆ.

Advertisement

ಈ ಕುರಿತು ಡಂಬಳ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಚುನಾವಣೆ ಜರುಗುವ ಕೇಂದ್ರಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುವುದರ ಮೂಲಕ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ ನಡೆಸಲು ವೇಳಾ ಪಟ್ಟಿ ಪ್ರಕಟಿಸಿದ್ದು, ಮಾ.16ರಿಂದ ಜೂನ್ 6ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈಗಾಗಲೇ ಚುನಾವಣಾ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಅಧಿಕಾರಿಗಳ ಸಲಹೆ ಸೂಚನೆಯಂತೆ ಸರ್ಕಾರಿ ಶಾಲಾ ಕಾಲೇಜುಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ವಿವಿಧ ತಂಡಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೇಮಕ ಮಾಡಿ ಆದೇಶಿಸಿದ್ದಾರೆ.

ತಾಲೂಕಿನ ಎಲ್ಲಾ ಇಲಾಖೆ ಹಾಗೂ ಅಧೀನ ಕಚೇರಿಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು, ನೌಕರರು ಯಾವುದೇ ರೀತಿಯಲ್ಲಿ ರಜೆಯ ಮೇಲೆ ತೆರಳದೆ ಕೇಂದ್ರ ಸ್ಥಾನದಲ್ಲಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಕಚೇರಿಯಿಂದ ಕೋರುವ ವರದಿಗಳನ್ನು ಚಾಚೂ ತಪ್ಪದೇ ಸಲ್ಲಿಸಬೇಕಾಗಿರುವ ಕಾರಣ, ಮುಂಡರಗಿ ತಾಲೂಕಿನ ಸರ್ಕಾರಿ ಶಾಲಾ ಕಾಲೇಜುಗಳ ಎಲ್ಲಾ ಅಧಿಕಾರಿಗಳು ಹಾಗೂ ನೌಕರರು ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು. ಅನಿವಾರ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಯಾವುದೇ ಅಧಿಕಾರಿ, ನೌಕರರು ರಜೆಯ ಮೇಲೆ ತೆರಳಲು ಮತ್ತು ಕೇಂದ್ರ ಸ್ಥಾನವನ್ನು ಬಿಡಬೇಕಾದಲ್ಲಿ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಪಡೆದು ತೆರಳಬೇಕು.

ಒಂದು ವೇಳೆ ತಪ್ಪಿದಲ್ಲಿ ಚುನಾವಣಾ ಕರ್ತವ್ಯ ನಿರ್ಲಕ್ಷತೆ, ಬೇಜವಾಬ್ದಾರಿ ತೋರಿವುದು ಕಂಡು ಬಂದರೆ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಲಾಗುವುದು. ಚುನಾವಣಾ ಕರ್ತವ್ಯ ಲೋಪ ಎಸಗಿದ ನೌಕರರು ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯನ್ವಯ ಶಿಸ್ತಿನ ಕ್ರಮಕ್ಕೆ ಒಳಗಾಗುತ್ತಾರೆ ಎಂದು ತಹಸೀಲ್ದಾರ ಧನಂಜಯ ಮಾಲಗಿತ್ತಿ ಹೇಳಿದರು.

ಚುನಾವಣಾ ತುರ್ತು ಕೆಲಸ ಕಾರ್ಯಗಳ ನಿರ್ವಹಣೆ ಸಂಬಂಧ ಭಾರತ ಚುನಾವಣಾ ಆಯೋಗವು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮತ್ತು ಜಿಲ್ಲಾಧಿಕಾರಿಗಳು ಕೋರುವ ವರದಿಗಳನ್ನು ನಿಗದಿತ ಸಮಯದೊಳಗೆ ಜಿಲ್ಲಾ ಕಚೇರಿಗೆ ಮಾಹಿತಿ ಒದಗಿಸಬೇಕಾಗಿರುವುದರಿಂದ ಮುಂಡರಗಿ ತಾಲೂಕಿನ ಅಧಿಕಾರಿ, ನೌಕರರು 24*7 ಅವಧಿಯಲ್ಲಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು ಚುನಾವಣಾ ತುರ್ತು ಕೆಲಸ ನಿರ್ವಹಿಸಬೇಕಾಗಿರುತ್ತದೆ ಎಂದು ತಹಸೀಲ್ದಾರರು ಹೇಳಿದರು.

 


Spread the love

LEAVE A REPLY

Please enter your comment!
Please enter your name here