ಕಡ್ಡಾಯ ಮತದಾನಕ್ಕೆ ಪತ್ರ ಬರೆದ ವಿದ್ಯಾರ್ಥಿಗಳು

0
letter
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : `ಪ್ರೀತಿಯ ತಂದೆಯವರಿಗೆ, ತಾಯಿಯವರಿಗೆ, ಅಣ್ಣಂದಿರಿಗೆ, ಅಕ್ಕಂದಿರಿಗೆ ನಮ್ಮ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಬರುವ ಮೇ. 7ರಂದು ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ’ ಎಂದು ವಸತಿ ಶಾಲೆಗಳ ವಿದ್ಯಾರ್ಥಿಗಳು ಪಾಲಕರಿಗೆ ಪತ್ರ ಬರೆಯುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

Advertisement

ಧಾರವಾಡದ ಪೋಸ್ಟ್ ಮ್ಯಾಟ್ರಿಕ್ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಮತದಾನದಿಂದ ದೂರ ಉಳಿಯದೇ ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಿ, ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಪತ್ರಗಳ ಮೂಲಕ ಮನವಿ ಮಾಡಿದರು.

ದಶಕಗಳ ಹಿಂದೆ ಜನರಿಗೆ ಪತ್ರಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ದೊರೆಯುತ್ತಿತ್ತು. ಇಂದು ಮೊಬೈಲ್, ಅಂತರ್ಜಾಲ, ಮಾಹಿತಿ ತಂತ್ರಜ್ಞಾನ ಬೆಳವಣಿಗೆಯಿಂದ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ. ಮಕ್ಕಳು ತಮ್ಮ ಪಾಲಕರಿಗೆ ಪತ್ರ ಬರೆಯುವುದರ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರಣೆ ನೀಡಿದ್ದಾರೆ. ಮಕ್ಕಳ ಪತ್ರ ಬರೆದಿರುವುದನ್ನು ಓದಿದಾಗ ಪಾಲಕರಿಗೆ ಖುಷಿ ನೀಡಲಿದೆ. ಅಲ್ಲದೇ ತಪ್ಪದೇ ಮತ ಚಲಾಯಿಸುವುದರಿಂದ, ಮತದಾನ ಪ್ರಮಾಣ ಹೆಚ್ಚಳವಾಗಲಿದೆಯೆಂದು ಸ್ವೀಪ್ ನೋಡಲ್ ಅಧಿಕಾರಿಗಳೂ ಆಗಿರುವ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ನುಡಿದರು.

ಜಿ.ಪಂ ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೋಪಾಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here