ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

0
narega
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮೇ 7ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವುದು ಎಲ್ಲರ ಹಕ್ಕು ಮತ್ತು ಕರ್ತವ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದರು.

Advertisement

ಲಕ್ಕುಂಡಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಬದು ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ಮತದಾನ ಮಾಡಿದಾಗ ಮಾತ್ರ ಪ್ರಜಾಪ್ರಭುತ್ವ ಗೆಲ್ಲಲು ಸಾಧ್ಯ. ಮೇ 7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೆ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಬೇಕು. ಪ್ರತಿ ಗ್ರಾಮದಲ್ಲಿ ಶೇ.100ರಷ್ಟು ಮತದಾನ ಆಗಬೇಕು ಎಂದರು.

ಈ ಸಂದರ್ಭದಲ್ಲಿ ಹಾಜರಿದ್ದ ನರೇಗಾ ಕೂಲಿಕಾರರಿಗೆ ಸಹಾಯಕ ನಿರ್ದೇಶಕರು (ಗ್ರಾ.ಉ) ಕುಮಾರ್ ಪೂಜಾರ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಜಂತ್ರಿ, ನರೇಗಾ ಐ.ಇ.ಸಿ ಸಂಯೋಜಕ ವಿರೇಶ್, ಬಿಎಫ್‌ಟಿ ಸಿದ್ದು ಸೋಮನಕಟ್ಟಿ, ಗ್ರಾ.ಕಾ.ಮಿ ಅಕ್ಕಮಹಾದೇವಿ ಹಾಗೂ ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here