ಪ್ರಾದೇಶಿಕ ಕಾರ್ಯಾಗಾರಕ್ಕೆ ಪ್ರಿಯಾಂಗಾ ಭೇಟಿ

0
ksrtc
Spread the love

ವಿಜಯಸಾಕ್ಷಿ ಸುದ್ದಿ, ಗದಗ : ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಅವರು ಇತ್ತೀಚೆಗೆ ಪ್ರಾದೇಶಿಕ ಕಾರ್ಯಾಗಾರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಾಹನಗಳ ದುರಸ್ತಿ ಕಾರ್ಯಗಳನ್ನು ವೀಕ್ಷಿಸಿ, ವಾಹನಗಳನ್ನು ಸರಿಯಾಗಿ ದುರಸ್ತಿ ಮಾಡಬೇಕೆಂದು ತಿಳಿಸಿದರು.

Advertisement

ಬೇಸಿಗೆ ಇರುವುದರಿಂದ ಜಾಗೃತೆಯಿಂದ ಬೆಂಕಿ ಅವಘಡಗಳ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದರು. ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆ ಮಾಡುವುದರ ಕುರಿತು ಸಂಬಂಧಿಸಿದ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಹುಬ್ಬಳ್ಳಿ ಗ್ರಾಮಾಂತರ ಘಟಕ-3ಕ್ಕೆ ಭೇಟಿ ನೀಡಿ, ಘಟಕದ ಆವರಣ ಸ್ವಚ್ಛವಾಗಿಡುವುದು, ಸಾರ್ವಜನಿಕ ದೂರುಗಳಿಗೆ ಆಸ್ಪದ ನೀಡದಂತೆ ವಾಹನಗಳ ಕಾರ್ಯಾಚರಣೆ ಮಾಡುವಂತೆ ಹಾಗೂ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿ/ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here