25.2 C
Gadag
Sunday, December 3, 2023
Home Blog

ಸುಂದರವಾಗಿ ಕಾಣಬೇಕೇ? ನಿಮ್ಮ ಮುಖದ ಸೌಂದರ್ಯಕ್ಕೆ ಮೊಸರೆ ಮದ್ದು..!

0

ಮೊಸರು ತ್ವಚೆಗೆ ಒಳ್ಳೆಯ ಔಷಧಿಯಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಮೊಸರು ಇರುತ್ತದೆ. ಮೊಸರಿಯಲ್ಲಿರುವ ಅಂಶದಿಂದ ನಮ್ಮ ಆರೋಗ್ಯ ಮತ್ತು ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ತ್ವಚೆಯ ಕೋಶಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್‍ಗಳು ನಿಮ್ಮ ತ್ವಚೆಯನ್ನು ತಾಜಾ ಆಗಿರಿಸುವ ಅಂಶ ಅದರಲ್ಲಿದೆ.

ಸುಂದರ ಮೊಗಕ್ಕೆ ಮೊಸರೆ ಮದ್ದು:
* ಎರಡು ಚಮಚ ಮೊಸರಿಗೆ ಚಿಟಿಕೆ ಸಕ್ಕರೆ ಹಾಕಿ ಮಿಕ್ಸ್ ಮಾಡಿ. ಬಳಿಕ ಅದನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ. ಈ ರೀತಿ ವಾರಕ್ಕೆ 2-3 ಬಾರಿ ಮಾಡಿದರೆ ಮುಖದಲ್ಲಿನ ಧೂಳು ಮತ್ತು ಕೊಳೆ ನಿವಾರಣೆಯಾಗುತ್ತದೆ.

* ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ, ಮಸಾಜ್ ಮಾಡಿಕೊಳ್ಳಿ ಬಳಿಕ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗಿ ಮುಖ ಸುಂದರವಾಗಿ ಕಾಣುತ್ತದೆ.

* ಎರಡು ಚಮಚ ಮೊಸರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ, ಮುಖಕ್ಕೆ ಹಚ್ಚಿ. ಬಳಿಕ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಒಣಚರ್ಮ ನಿವಾರಣೆಯಾಗುತ್ತದೆ.

* ಮೊಸರು ಅರ್ಧ ಕಪ್, 3 ಚಮಚ ತುರಿದ ಸೌತೆಕಾಯಿಯನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. 15 ನಿಮಿಷದ ನಂತರ ತಣ್ಣಗಿರುವ ನೀರಿನಿಂದ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡುವುದರಿಂದ ಟ್ಯಾನ್ ಮತ್ತು ಚರ್ಮದ ಕಪ್ಪು ಕಡಿಮೆಯಾಗುತ್ತದೆ.

* ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಬೇಕು. ಬಳಿಕ ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಬೇಕು. ಇದು ಜಿಡ್ಡಿನ ಮತ್ತ ಸೂಕ್ಷ್ಮ ತ್ವಚೆಗೆ ಸೂಕ್ತವಾಗಿದೆ. ಜೊತೆಗೆ ತಾಜಾ ಕಾಂತಿಯನ್ನು ನೀಡುತ್ತದೆ.

* ಮೊಸರು ಕೂದಲಿನ ನೈಸರ್ಗಿಕ ಪೋಷಣೆ ನೀಡುತ್ತದೆ. ಆದ್ದರಿಂದ ಮೊಸರನ್ನು ಕೂದಲಿನ ಬುಡಕ್ಕೆ ಮಸಾಜ್ ಮಾಡುವುದರಿಂದ ಕೂದಲಿನ ಹೊಳಪು ಹೆಚ್ಚುತ್ತದೆ.

* 2 ಚಮಚ ಮೊಸರಿಗೆ 1 ಚಮಚ ಅರಶಿಣವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ, ಬಳಿಕ ನಿಮ್ಮ ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

* ಮೆಹಂದಿ ಪುಡಿಗೆ ಮೊಸರು ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ಬೇಯಿಸಿದ ಆಲೂಗಡ್ಡೆ, 2 ಚಮಚ ಮೊಸರು ಮತ್ತು ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿ, ನಿಮ್ಮ ಮುಖವನ್ನು ತೊಳೆದುಕೊಂಡ ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ನಂತರ 20 ನಿಮಿಷಗಳ ತರುವಾಯ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

* ನಿಂಬೆ ಸಿಪ್ಪೆ, ಕಿತ್ತಳೆ ಸಿಪ್ಪೆ ಒಣಗಿಸಿ, ಪುಡಿಮಾಡಿ ಮೊಸರಿನಲ್ಲಿ ಕಲಸಿ, ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದ ಮೇಲಿನ ಕಲೆ ಕಡಿಮೆಯಾಗುತ್ತದೆ.

ಧರಿಸಿರುವ ಟೀಶರ್ಟ್ ಅನ್ನೇ ತೆಗೆದು ಅಭಿಮಾನಿಯ ಬೈಕ್ ಒರೆಸಿದ ಧೋನಿ..!

0

ಕ್ರಿಕೇಟಿಗ ಮಹೇಂದ್ರ ಸಿಂಗ್ ಧೋನಿ ಪ್ರಪಂಚದಾದ್ಯಂತ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಆಗಸ್ಟ್ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌’ಗೆ ವಿದಾಯ ಹೇಳಿದ್ದರೂ, ಇಂದಿಗೂ ಐಪಿಎಲ್ ಪಂದ್ಯ ಆಡಲೆಂದು ಕ್ರೀಡಾಂಗಣಕ್ಕೆ ಬಂದರೆ ಫ್ಯಾನ್ಸ್ ಹುಚ್ಚೆದ್ದು ಕುಣಿಯುತ್ತಾರೆ.

ಧೋನಿಗೆ ಸಂಬಂಧಿಸಿದ ವೀಡಿಯೊಗಳು ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ಇಂತಹದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಅದರಲ್ಲಿ ಅಭಿಮಾನಿಯೊಬ್ಬರ ಬೈಕ್ ಅನ್ನು ಟೀ ಶರ್ಟ್ ನಿಂದ ಕ್ಲೀನ್ ಮಾಡುವುದನ್ನು ಕಾಣಬಹುದು.

ವೈರಲ್​ ಆಗಿರುವ ಈ ವೀಡಿಯೋದಲ್ಲಿ ಅಭಿಮಾನಿಯೊಬ್ಬ ತಮ್ಮ ಬೈಕ್​ ಮೇಲೆ ಆಟೋಗ್ರಾಫ್ ಹಾಕುವಂತೆ ಕೇಳುತ್ತಿರುವುದು ಕಂಡು ಬಂದಿದೆ. ಅಭಿಮಾನಿ ಕೋರಿಕೆಗೆ ಓಕೆ ಎಂದ ಧೋನಿ ಬೈಕ್​ ನೋಡಿ ಖುಷಿಪಟ್ಟು ಸಹಿ ಮಾಡುವ ಮೊದಲು ಸೂಪರ್ ಬೈಕ್ ಅನ್ನು ತಮ್ಮ ಟೀ ಶರ್ಟ್‌’ನಿಂದಲೇ ಕ್ಲೀನ್ ಮಾಡಿ ಬಳಿಕ ಸಹಿ ಮಾಡಿದ್ದಾರೆ.

ಬಿಜೆಪಿ, ಮೋದಿಜೀ ಪರ ಸುನಾಮಿ ರೀತಿ ಅಲೆ: ವಿಜಯೇಂದ್ರ

0

ಬೆಂಗಳೂರು: ಇಡೀ ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಈ ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿ ಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು. 5 ರಾಜ್ಯಗಳ ವಿಜಯ, ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಷಯದಲ್ಲಿ ಯಾವುದೇ ಅನುಮಾನ ಉಳಿದಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಗೆದ್ದರೂ ಬಿಜೆಪಿಗೆ ಅಲ್ಲಿನ ಜನತೆ ನೀಡಿರುವ ಬೆಂಬಲ ಎದ್ದು ಕಾಣಿಸಿದೆ: ಪ್ರಧಾನಿ ಮೋದಿ

0

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಚುನಾವಣೆಯಲ್ಲಿ ಸೋಲಿನ ಬಳಿಕವೂ ಎಕ್ಸ್‌ನಲ್ಲಿ ಬರೆದು ಧನ್ಯವಾದ ತಿಳಿಸಿದ್ದಾರೆ. ಹೌದು ತೆಲಂಗಾಣದೊಂದಿಗಿನ ನಮ್ಮ ಬಾಂಧವ್ಯ ಮುರಿಯಲಾಗದು. ಕಳೆದ ಕೆಲವು ವರ್ಷಗಳಿಂದ ಈ ಬೆಂಬಲವು ಹೆಚ್ಚುತ್ತಿದೆ. ನಾವು ತೆಲಂಗಾಣ ಜನರಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಚುನಾವಣೆಯಲ್ಲಿ ಸೋಲಿನ ಬಳಿಕವೂ ಎಕ್ಸ್‌ನಲ್ಲಿ ಬರೆದು ಧನ್ಯವಾದ ತಿಳಿಸಿದ್ದಾರೆ.

ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿಗೆ ಅಲ್ಲಿನ ಜನತೆ ನೀಡಿರುವ ಬೆಂಬಲ ಎದ್ದು ಕಾಣಿಸಿದೆ. ಈ ಹಿನ್ನೆಲೆ ಎಕ್ಸ್‌ನಲ್ಲಿ ಬರೆದಿರುವ ನರೇಂದ್ರ ಮೋದಿ ಪಂಚರಾಜ್ಯ ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರು ಸೇರಿದಂತೆ ತೆಲಂಗಾಣದಲ್ಲಿ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ: ಶಾಸಕ ಮುನಿರತ್ನ

0

ಬೆಂಗಳೂರು: ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುತ್ತದೆ.

ಇಲ್ಲಿನ ಗ್ಯಾರಂಟಿ ತೆಲಂಗಾಣದಲ್ಲಿ ವರ್ಕ್ ಆಗಿದೆ. ನಮ್ಮ ನಿರೀಕ್ಷೆ ತೆಲಂಗಾಣದಲ್ಲಿ ಹುಸಿಯಾಯ್ತು. ಆದರೆ ಉಳಿದ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಇಂದು ಬಿಜೆಪಿಗೆ ಒಳ್ಳೆಯ ದಿನ ಎಂದರು. 

 

ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಧು ಸಾವು..!

0

ಮಹದೇವಪುರ: ಪ್ರೀತಿಸಿ ಎರಡು ತಿಂಗಳ ಹಿಂದೆಷ್ಟೆ ಮದುವೆಯಾಗಿದ್ದರು. ಮದುವೆಯಾಗಿ ಎರಡು ತಿಂಗಳೇ ವರನ ಕಡೆಯವರು ವಧುವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು, ಅನುಮಾನಾಸ್ಪದವಾಗಿ ಯುವತಿಯ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವಿಭಾಗದ ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುದ್ದಾಗಿ ಕಾಣುತ್ತಿರುವ ಜೋಡಿಯ ಹೆಸರು ಪ್ರವೀಣ್ ಮತ್ತು ಅನುಷಾ. ಇವರಿಬ್ಬರೂ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನವರು. ಎರಡು ತಿಂಗಳ ಹಿಂದೆ ಕುಟುಂಬದವರ ವಿರೋಧ ನಡುವೆಯೂ ಯುವತಿ ಪಕ್ಕದ ಊರಿನ ಪ್ರವೀಣ್ ನನ್ನು ಮದುವೆಯಾಗಿ ಮಹದೇವಪುರದ ಸಿಂಗಯ್ಯನಪಾಳ್ಯಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಕೆಲ ದಿನಗಳ ನಂತರ ಯುವತಿಯ ಪೋಷಕರು ನವ ದಂಪತಿಯನ್ನು ಕರೆಸಿ ಬುದ್ದಿವಾದ ಹೇಳಿ ಸುಖ ಸಂಸಾರದಿಂದ ಬಾಳುವಂತೆ ಆಶೀರ್ವದಿಸಿದ್ದರು.

ಆದ್ರೆ ಹುಡುಗನ ಕುಟುಂಬದವರು ಯುವತಿಗೆ ಆಸ್ತಿ ಮತ್ತು ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆ ಮಾಡಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನೂ ಯುವತಿ ಸಾವಿಗೆ ಅತ್ತೆ ನಾಗಮ್ಮ, ಸೋದರ ಮಾವ ರಾಜೇಶ್ ಹಾಗೂ ದೊಡ್ಡಪ್ಪ ತಿಮ್ಮೆಗೌಡನ ಮಗ ಮಹೇಶ್ ಕಾರಣವೆಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ.

ಇದು ಸೆಮಿಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು: ಎಂ.ಪಿ ರೇಣುಕಾಚಾರ್ಯ

0

ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ‌.ಪಿ‌.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದ್ದು, ಇದು ಸೆಮಿ ಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು.

ಕರ್ನಾಟಕದಲ್ಲಿ ಕೊಟ್ಟ ಭರವಸೆಗಳು ಎಲ್ಲಾ ಪೇಲೂರ್ ಆಗಿದೆ‌. ಭರವಸೆಗಳಿಂದ ಜನರ ಮತಗಳನ್ನು ಪಡೆಯಲು ಸಾಧ್ಯವಿಲ್ಲಾ. ದೇಶಕ್ಕೆ ಬಲಿಷ್ಟ ನಾಯಕ ಬೇಕು, ಅದು ನರೇಂದ್ರ ಮೋದಿಜಿ . ಮುಂದೆ ದೇಶದಲ್ಲಿ 350 ಕ್ಕೂ ಹೆಚ್ಚು ಲೋಕಸಬಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಕೆ.ಎಸ್.ಈಶ್ವರಪ್ಪ

0

ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವಿನತ್ತ ಸಾಗಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಮತ್ತೆ ಪ್ರದಾನಿಯಾಗಬೇಕು ಎಂದು ಬಯಸಿದ್ದು, ಮೂರು ರಾಜ್ಯಗಳಲ್ಲಿ ಗೆಲುವಿನ ಗಿಫ್ಟ್ ನೀಡಿದ್ದಾರೆ. ಇದು ದೇಶದ ಎಲ್ಲಾ ಕಾರ್ಯಕರ್ತರಿಗೆ ಸಂತಸ ತಂದಿದೆ. ಇಂತಹ ಸಂತಸ ಪದೇ ಪದೇ ಬರಲಿ ಮಧ್ಯ ಪ್ರದೇಶ ರಾಜಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವಿತ್ತು. ಆದರೆ ಛತ್ತಿಸ್ ಘಡ ಗೆಲ್ಲುತ್ತೇವೆ ಎಂಬ ನಂಬಿಕೆ ಇರಲಿಲ್ಲ. ಕಾಂಗ್ರೇಸ್ ನವರು ಐದು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದರು.

ಕೇವಲ ಒಂಜು ರಾಜ್ಯದಲ್ಲಿ ಅವರು ಗೆದ್ದಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಜನರಿಗಿದ್ದ ಬೇಸರ, ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತದೆಗೆ ಹೇಗೆ ಮೋಸ ಮಾಡಿದರೋ..ಹಾಗೆಯೇ ಮುಸ್ಲಿಂ ಮತಗಳನ್ನು ಕ್ರೂಡಿಕರಿಸಿ ಗೆಲುವು ಸಾಧಿಸಿದ್ದಾರೆ. ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೇಸ್ ಮೋಸ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅವರು ತೆಲಂಗಾಣವನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಇಂದಿನ ಫಲಿತಾಂಶ ಮುಂದಿನ ಚುನಾವಣೆಗಳಲ್ಲಿ ಬರಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಏರಿದ ಬಿಜೆಪಿ..!

0

ಭೋಪಾಲ್‌: ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಹೌದು. ಮಧ್ಯಪ್ರದೇಶದಲ್ಲಿ ಮಹಿಳೆಯರು ಕೈ ಹಿಡಿದ ಪರಿಣಾಮ ಮತ್ತೆ ಅಧಿಕಾರಕ್ಕೆ ಏರಿದೆ.  ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್‌ ಸಿಂಹ್‌ ಚೌಹಾಣ್‌ ಲಾಡ್ಲಿ ಬೆಹನಾ ಹೆಸರಿನ ಯೋಜನೆ ಆರಂಭಿಸಿತ್ತು.

ಕಾಂಗ್ರೆಸ್‌ ಇದು ಚುನಾವಣೆ ಗಿಮಿಕ್‌ ಎಂದು ಬಣ್ಣಿಸಿದರೆ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾತ್ರ ಮಾಡದೇ ಚಾಲನೆ ನೀಡಿತ್ತು. ಬಡ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ನೀಡಿದ್ದರೆ ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು.

ಕರ್ನಾಟಕ ಚುನಾವಣೆಯಲ್ಲೂ ಮಹಿಳೆಯರು ಪ್ರಧಾನ ಪಾತ್ರ ವಹಿಸಿದ್ದರು. ಇದನ್ನು ಮೊದಲೇ ಗಮನಿಸಿದ್ದ ಮಧ್ಯಪ್ರದೇಶ ಸರ್ಕಾರ ಮಹಿಳಾ ಪರವಾದ ಯೋಜನೆಗಳು ಪ್ರಕಟಿಸಿದ ಪರಿಣಾಮ ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಮಧ್ಯಾಹ್ನ 12 ಗಂಟೆಯ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 157, ಕಾಂಗ್ರೆಸ್‌ 70, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಫಲಿತಾಂಶದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಠುಸ್ ಪಟಾಕಿ ಆಗಿದೆ: ಆರ್. ಅಶೋಕ್

0

ಬೆಂಗಳೂರು: 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಠುಸ್‌ ಪಟಾಕಿ ಆಗಿದೆ, ಯಾವುದೇ ಪರಿಣಾಮ ಬೀರಿಲ್ಲ. ಅಲ್ಲಿ ಮೋದಿ ಅವರ ಪ್ರಭಾವ ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್‌. ಅಶೋಕ್‌  ಹೇಳಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ಅಶೋಕ್‌, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ.

ತೆಲಂಗಾಣದಲ್ಲೂ ಬಿಜೆಪಿಗೆ 11 ಸ್ಥಾನ ಈಗ ಬಂದಿದೆ. ಎಲ್ಲ ಕಡೆ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುತ್ತಿದೆ. ಮೋದಿಯವರ ಪ್ರಭಾವ ಎಲ್ಲ ಕಡೆ ಕಾಣ್ತಿದೆ. ಛತ್ತಿಸ್‌ಗಢದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ರೆಸಾರ್ಟ್‌ ರಾಜಕಾರಣ ಮಾಡಲು ಹೊರಟಿದೆ. ದೊಡ್ಡ ಶೋ ಕೊಡಲು ಡಿಕೆಶಿ ತೆಲಂಗಾಣಕ್ಕೆ ಹೋಗಿದ್ದಾರೆ. ಜನರ ಕಷ್ಟ ಮರೆತು ತೆಲಂಗಾಣ ಶಾಸಕರಿಗಾಗಿ ಡಿಕೆಶಿ ಹೋಗಿದ್ದಾರೆ, ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರೆ.