Home Blog

ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದಲ್ಲಿ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಆಯುಷ್ ನಿರ್ದೇಶನಾಲಯದ ಮಾರ್ಗಸೂಚಿಗಳನುಸಾರ ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆ ಆಗುತ್ತಿದ್ದು, ಈ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯಗಳ ಸೇವನೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಆಯುಷ್ ಪದ್ಧತಿಗಳಲ್ಲಿ ಪಾನೀಯಗಳ ಮಹತ್ವವನ್ನು ಪರಿಚಯಿಸುವ ದೃಷ್ಟಿಯಿಂದ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚುನಾವಣಾ ಕೊಠಡಿಯಲ್ಲಿನ ಲೋಕಸಭಾ ಚುನಾವಣಾ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿಯವರಿಗೆ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗಾಗಿ ಹಮ್ಮಿಕೊಂಡು, ಉಚಿತವಾಗಿ ಚಿಂಚಾ ಪಾನಕವನ್ನು ವಿತರಿಸಲಾಯಿತು.

ಇದರಿಂದ ವ್ಯಕ್ತಿಯ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ, ಮಲಬದ್ಧತೆಯನ್ನು ನಿವಾರಿಸುವುದು, ಬಾಯಾರಿಕೆಯನ್ನು ನೀಗಿಸುವುದು ಸೇರಿದಂತೆ ಅನೇಕ ಉಪಯೋಗಗಳಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡೆ ತಿಳಿಸಿದರು.

ಮದುವೆ ಮನೆಯಲ್ಲಿ ಮತದಾನ ಜಾಗೃತಿ

0

ವಿಜಯಸಾಕ್ಷಿ ಸುದ್ದಿ, ಗದಗ : ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ-ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಕಲಕೇರಿ ಗ್ರಾಮದ ಯಮನೂರಸಾಬ ಅವರ ಜೊತೆ ಜಹೀದಾಬೇಗಂ ನವಜೀವನಕ್ಕೆ ಕಾಲಿಟ್ಟರು. ಈ ವೇಳೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮದುವೆಗೆ ಆಗಮಿಸಿದ್ದ ಬಂಧುಗಳಲ್ಲಿ ವಧು-ವರರ ಜೊತೆ ವೇದಿಕೆಯ ಮೇಲಿನಿಂದಲೇ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ತಾ.ಪಂ ಇಓ ವಿಶ್ವನಾಥ ಹೊಸಮನಿ ಈ ಸಂದರ್ಭದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಅವಕಾಶ ನಿಮ್ಮದಾಗಿದೆ. ಪ್ರತಿಯೊಬ್ಬರೂ ಹಕ್ಕು ಚಲಾಯಿಸಿ, ಸಂವಿಧಾನದ ಆಶಯ ಮತ್ತು ಪ್ರಜಾಪ್ರಭುತ್ವ ಯಶಸ್ವಿಗೊಳಿಸಬೇಕು. ಮತದಾನದಿಂದ ಯಾರೂ ದೂರ ಉಳಿಯಬಾರದು ಎಂದರು.

ವಧು-ವರರಿಗೆ ಹಾಗೂ ಮದುವೆಗೆ ಹಾಜರಾದವರಿಗೆ ಚುನಾವಣೆಯಲ್ಲಿ ಮತದಾನ ನಮ್ಮ ಹಕ್ಕು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಪಿಡಿಓ ಫಕ್ರುದ್ದೀನ್ ನಧಾಪ, ಸಂತೋಷ ಮೇಟಿ, ಅಕ್ಕಮಹಾದೇವಿ ರುದ್ರೇಶ್ವರಮಠ, ತಾ.ಪಂ ಸಿಬ್ಬಂದಿಗಳಾದ ಎಚ್.ಎಂ. ಕಾತರಕಿ, ಸಿ.ಬಿ. ಪಾಟೀಲ, ಅಶೋಕ ಅಣ್ಣಿಗೇರಿ, ಸಿದ್ದು ಮಡಿವಾಳರ, ಮೋಹನ ಹೊಂಬಳ, ಗ್ರಾ.ಪಂ ಸಿಬ್ಬಂದಿಗಳು ಸೇರಿದಂತೆ ಇತರರಿದ್ದರು.

ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಬಲ : ವೈಶಾಲಿ ಎಂ.ಎಲ್

0

ವಿಜಯಸಾಕ್ಷಿ ಸುದ್ದಿ, ಗದಗ : ಈ ಬಾರಿ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ. 18 ವರ್ಷ ಪೂರ್ಣಗೊಂಡ ಅರ್ಹ ಮತದಾರರೆಲ್ಲರೂ ಮತದಾನ ಮಾಡುವುದು ಅತಿ ಮುಖ್ಯವಾಗಿದೆ. ಪ್ರತಿ ಮತವೂ ಅಮೂಲ್ಯವಾಗಿದೆ. ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವದ ಬಲ ಹೆಚ್ಚಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಮತದಾನದ ಮಹತ್ವ ಕುರಿತು ಹಮ್ಮಿಕೊಂಡಿದ್ದ ‘ಯುವ ಮತದಾರರಿಂದ ಮಾನವ ಸರಪಳಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

sarapali

ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿ.ಪಂ ಸಿಇಓ ಎಸ್.ಭರತ್ ಮಾತನಾಡಿ, ಮೇ 7ರಂದು ನಡೆಯುವ ಮತದಾನದಲ್ಲಿ ಅರ್ಹರೆಲ್ಲರೂ ಮತ ಚಲಾಯಿಸಬೇಕು. ಅರ್ಹರು ಮತದಾನದಿಂದ ವಂಚಿತರಾಗಬಾರದು. ಚುನಾವಣಾ ಪ್ರಕ್ರಿಯೆಯಲ್ಲಿ ಯುವಜನರು ಸಡಗರ-ಸಂಭ್ರಮದಿಂದ ತಮ್ಮ ಹಕ್ಕು ಚಲಾಯಿಸಬೇಕು. ಪ್ರತಿಯೊಂದು ಮತವೂ ಸಹ ಅತ್ಯಮೂಲ್ಯವಾಗಿದ್ದು, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕೋರಿದರು.

ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ ಮಾತನಾಡಿ, ಯುವ ಜನರು ಯಾವುದೇ ಆಸೆ-ಆಮಿಷಗಳಿಗೆ ತುತ್ತಾಗದೇ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.

ಇನ್ನೋರ್ವ ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಯೋಗಪಟು ಭೀಮಪ್ಪ ಯಮನಪ್ಪ ಕಬಾಡರ ಮಾತನಾಡಿ, ರಾಷ್ಟçದ ಸುಭದ್ರತೆಗೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಬೇಕು. ಆ ನಿಟ್ಟಿನಲ್ಲಿ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಜಿ.ಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ, ತಾ.ಪಂ ಇಓ ಮಾಣಿಕರಾವ್ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಇತರರು ಇದ್ದರು. ಗದಗ ನಗರದ ವಿವಿಧ ಕಾಲೇಜಿನ ನೂರಾರು ಯುವ ಮತದಾರರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಚುನಾವಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 1950 ಅಥವಾ ಸಿವಿಜಲ್ ಆಪ್ ಮೂಲಕ ದೂರು ದಾಖಲಿಸಬಹುದಾಗಿದ್ದು, ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಬಹುದಾಗಿದೆ. ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಯುವ ಮತದಾರರ ಪಾತ್ರ ಹೆಚ್ಚಿನದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ.
– ವೈಶಾಲಿ ಎಂ.ಎಲ್.
ಗದಗ ಜಿಲ್ಲಾಧಿಕಾರಿಗಳು.

 

ಜೋಳ ಖರೀದಿ ನೋಂದಣಿ ವಿಸ್ತರಿಸಿ : ಟಾಕಪ್ಪ ಸಾತಪುತೆ

0

ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾರ್ಚ್ 27ರಿಂದ ಪ್ರಾರಂಭವಾಗಿದ್ದ ರೈತರ ಜೋಳ ಖರೀದಿ ನೋಂದಣಿ ಕಾರ್ಯಕ್ರಮವನ್ನು ಮುಂದುವರಿಸುವಂತೆ ಆಗ್ರಹಿಸಿ ಭಾರತಿಯ ಕಿಸಾನ್ ಸಂಘದಿಂದ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಮನವಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಭಾರತಿಯ ಕಿಸಾನ್ ಸಂಘದ ಅಧ್ಯಕ್ಷ ಟಾಕಪ್ಪ ಸಾತಪುತೆ, ತಾಲೂಕಿನಲ್ಲಿ ರೈತರ ಅನುಕೂಲಕ್ಕಾಗಿ ಜೋಳದ ಖರೀದಿ ಕೇಂದ್ರ ಸ್ಥಾಪಿಸಿದ್ದು ಅನುಕೂಲವಾಗಿತ್ತು. ಆದರೆ, ಪ್ರಾರಂಭದಿಂದ ಇಂದಿನವರೆಗೆ ತಾಲೂಕಿನ ಕೇವಲ 25 ರೈತರು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ.

ಏಪ್ರಿಲ್ 16ರಂದು ಸದರಿ ನೋಂದಣೆ ಕಾರ್ಯ ಸ್ಥಗಿತಗೊಂಡಿದ್ದು, ಇದರಿಂದ ರೈತರಿಗೆ ತೊಂದರೆಯಾಗಿದೆ.

ಕೂಡಲೇ ನೋಂದಣಿ ಅವಧಿ ವಿಸ್ತರಿಸುವ ಮೂಲಕ ರೈತರಿಗೆ ಅನೂಕೂಲ ಮಾಡಿಕೊಡಬೇಕು ಎಂದರು.

ಕೆಲವು ರೈತರಿಗೆ ಜಿಪಿಎಸ್ ಬಗ್ಗೆ ಮಾಹಿತಿ ಇಲ್ಲದ ಕಾರಣ ತಮ್ಮ ಹೊಲದ ಜಿಪಿಎಸ್ ಮಾಡಿಸಿಲ್ಲ. ಕಾರಣ, ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ಇಲ್ಲದ ರೈತರ ಹೊಲಗಳಿಗೆ ತೆರಳಿ ಜಿಪಿಎಸ್ ಮಾಡಿಸಲು ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಫಕ್ಕೀರಪ್ಪ ಚಿಕ್ಕಣ್ಣನವರ, ಬಸವಣೆಪ್ಪ ಚಿಕ್ಕಣ್ಣನವರ, ಮಹಾದೇವಪ್ಪ ಹುಲಗೂರ, ಶಂಕ್ರಪ್ಪ ಅಣ್ಣಿಗೇರಿ, ಯಲ್ಲಪ್ಪ ಅಣ್ಣಿಗೇರಿ, ಬಸವರಾಜ ಸಂಬಾಜಿ, ಫಕ್ಕೀರಪ್ಪ ಮಾಳಗಿಮನಿ, ಬಸನಗೌಡ್ರ ಪಾಟೀಲ್ ಮುಂತಾದವರಿದ್ದರು.

ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಿ : ಅಜಯ ಗುಪ್ತಾ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಅಜಯ ಗುಪ್ತಾ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಧಾರವಾಡ ಲೋಕಸಭಾ ಮತಕ್ಷೇತ್ರದ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯ ಮತದಾನ ಪೂರ್ವದ ಮತ್ತು ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಬೇಕು.

ಚುನಾವಣಾಧಿಕಾರಿಗಳು ಸೇರಿದಂತೆ ಎಲ್ಲ ನಿಯೋಜಿತ ಅಧಿಕಾರಿಗಳು ಅನುಭವಿಕರಿದ್ದು, ಉತ್ತಮ ರೀತಿಯಲ್ಲಿ ಕಾರ್ಯ ಮಾಡುವಿರೆಂಬ ಭರವಸೆ ಇದೆ. ಚುನಾವಣೆಯ ಎಲ್ಲ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಲಾಗಿದ್ದು, ನಿಯಮಾನುಸಾರವಿದೆ ಎಂದರು.

ಸುವಿಧಾ ಮತ್ತು ಸಿ-ವಿಜಲ್ ಆ್ಯಪ್ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ಸಾರ್ವಜನಿಕರಲ್ಲಿ ಸುವಿಧಾ ಮತ್ತು ಸಿ-ವಿಜಿಲ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಧಾರವಾಡ ಮತಕ್ಷೇತ್ರದಲ್ಲಿ ಸಾರ್ವತ್ರಿಕ ಚುನಾವಣೆಯು ಶಾಂತಿಯುತ, ಮುಕ್ತ, ನ್ಯಾಯಸಮ್ಮತವಾಗಿ ಜರುಗಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಸಿ-ವಿಜಿಲ್ ಮೂಲಕ ಇಲ್ಲಿಯವರೆಗೆ 1,757 ದೂರುಗಳು ಸ್ವೀಕೃತವಾಗಿದ್ದು, ನಿಗದಿತ 100 ನಿಮಿಷಗಳ ಕಾಲಮಿತಿಯಲ್ಲಿ ಎಲ್ಲ ದೂರುಗಳನ್ನು ನಿಯಮಾನುಸಾರ ಪರಿಹರಿಸಿ, ವಿಲೇವಾರಿ ಮಾಡಲಾಗಿದೆ. ಸುವಿಧಾ ಮೂಲಕ ಈವರೆಗೆ ಸಲ್ಲಿಸಿದ್ದ 135 ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಅನುಮತಿಸಿ, ವಿಲೇವಾರಿ ಮಾಡಲಾಗಿದೆ ಎಂದು ದಿವ್ಯ ಪ್ರಭು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ಜಿಲ್ಲೆಯ ಎಲ್ಲ ನಗರಗಳಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ರಕ್ಷಣಾ ಪಡೆಯೊಂದಿಗೆ ಪಥ ಸಂಚಲನ ಮಾಡಿ, ಜನರಲ್ಲಿ ಸುವ್ಯವಸ್ಥಿತ ಚುನಾವಣೆಯ ಬಗ್ಗೆ ಆತ್ಮ ವಿಶ್ವಾಸ, ಸ್ಥೈರ್ಯ ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿಯುತ, ಸುವ್ಯವಸ್ಥಿತ, ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಜಿಲ್ಲಾ ಪಂಚಾಯತ ಸಿಇಓ ಸ್ವೂರಪ ಟಿ.ಕೆ. ಮಾತನಾಡಿ, ಜಿಲ್ಲೆಯಾಂದ್ಯತ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಶೇ. 75ಕ್ಕಿಂತ ಹೆಚ್ಚು ಮತದಾನ ಮಾಡಿಸುವ ಗುರಿ ಹೊಂದಲಾಗಿದೆ ಎಂದು

ಸಭೆಯಲ್ಲಿ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಮೋನಾ ರೋತ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಆದಾಯ ತೆರಿಗೆ ಇಲಾಖೆ ಅಧಿಕಾರಿ ಪಕೀರೇಶ ಬಾದಾಮಿ, ಜಿಲ್ಲಾ ವೆಚ್ಚ ನೋಡಲ್ ಅಧಿಕಾರಿ ವಿಶ್ವನಾಥ ಪಿ.ಬಿ., ಅಂಚೆ ಮತದಾನ ನೋಡಲ್ ಅಧಿಕಾರಿ ಮೋಹನ ಶಿವಣ್ಣವರ, ಸುವಿಧಾ ನೋಡಲ್ ಅಧಿಕಾರಿ ರೇಷ್ಮಾ ತಾಳಿಕೋಟಿ, ಜಿಲ್ಲಾಧಿಕಾರಿಗಳ ಕಚೇರಿ ನೋಡಲ್ ಅಧಿಕಾರಿ ಅನುರಾಧಾ ವಸ್ತçದ, ಸಿ-ವಿಜಿಲ್ ನೋಡಲ್ ಅಧಿಕಾರಿ ಅನೀಸ್ ನಾಯಕ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು, ಚುನಾವಣಾ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಮಾತನಾಡಿ, ಮಹಾನಗರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಮತ್ತು ಮುಕ್ತವಾಗಿ ಚುನಾವಣೆ ಜರುಗಿಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸ್ ಸಿಬ್ಬಂದಿಯೊಂದಿಗೆ ಅರೆ ಸೇನಾ ಪಡೆ, ಮೀಸಲು ಪಡೆ, ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗುತ್ತದೆ. ಲೈಸನ್ಸ್ ಪಡೆದಿರುವ 865 ಗನ್‌ಗಳನ್ನು ನಿಯಮಾನುಸಾರ ವಶಕ್ಕೆ ಪಡೆದು, ಆಯಾ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಲಾಗಿದೆ. 88 ಗನ್‌ಗಳಿಗೆ ಕಾನೂನು ಪ್ರಕಾರ ವಿನಾಯಿತಿ ನೀಡಲಾಗಿದೆ.

ಈಗಾಗಲೇ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿ ಆಗಿರುವ 21 ಜನ ಆರೋಪಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

 

ದೇಶದ ರಕ್ಷಣೆಗಾಗಿ ಮತ ಚಲಾಯಿಸಿ : ವೆಂಕಟೇಶಯ್ಯ

0

ವಿಜಯಸಾಕ್ಷಿ ಸುದ್ದಿ, ಗದಗ : 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತಮ್ಮ ಆಡಳಿತ ಅವಧಿಯಲ್ಲಿ ಸ್ಲಂ ನಿವಾಸಿಗಳಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ.

ಸ್ಲಂ ಜನರ ಭೂಮಿಯನ್ನು ಸಾರ್ವಜನಿಕ ಸಂಪನ್ಮೂಲವೆಂದು ಘೋಷಿಸಿದ ನರೇಂದ್ರ ಮೋದಿಯವರ ಸರ್ಕಾರ ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದೆ. ನಮ್ಮ ದೇಶದ ಸಂವಿಧಾನ ಮತ್ತು ದೇಶದ ರಕ್ಷಣೆಗಾಗಿ ಸ್ಲಂ ಜನರು ಮತ ಚಲಾಯಿಸಬೇಕೆಂದು ಗದಗ ಜಿಲ್ಲಾ ಡಿಎಸ್‌ಎಸ್ ಸಂಚಾಲಕ ವೆಂಕಟೇಶಯ್ಯ ಕರೆ ನೀಡಿದರು.

ಅವರು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ-2024ರ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಬಡವರಿಗೆ ಉಪಯೋಗವಾಗುವ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತರದೇ ಕೇಂದ್ರ ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡುವಂತ ಕೆಲಸವನ್ನು ಮಾಡಿದೆ ಎಂದರು.

ಪ್ರಗತಿಪರ ಚಿಂತಕ ಬಸವರಾಜ ಪೂಜಾರ ಮಾತನಾಡಿದರು. ಸ್ಲಂ ಸಮಿತಿ ಪದಾಧಿಕಾರಿಗಳಾದ ರವಿಕುಮಾರ ಬೆಳಮಕರ, ಅಶೋಕ ಕುಸಬಿ, ಮೆಹರುನಿಸಾ ಢಾಲಾಯತ, ಇಬ್ರಾಹಿಮ ಮುಲ್ಲಾ, ಶಿವಾನಂದ ಶಿಗ್ಲಿ, ಸಾಕ್ರುಬಾಯಿ ಗೋಸಾವಿ, ಮೆಹಬೂಬಸಾಬ ಬಳ್ಳಾರಿ, ಬಾಷಾಸಾಬ ಡಂಬಳ, ದಾದು ಗೋಸಾವಿ, ಖಾಜಾಸಾಬ ಇಸ್ಮಾಯಿಲನವರ, ಶಿವಪ್ಪ ಲಕ್ಕುಂಡಿ, ಸಲೀಮ ಬೈರಕದಾರ, ಚಂದ್ರಿಕಾ ರೋಣದ, ಅಫ್ರೋಜಾ ಹುಬ್ಬಳ್ಳಿ, ಶೊಸೀಲಮ್ಮ ಗೊಂದರ, ಫೈರುಜಾ ಹುಬ್ಬಳ್ಳಿ, ಮೆಹರುನಿಸಾ ಡಂಬಳ, ತಿಪ್ಪಮ್ಮ ಕೊರವರ, ಕೌಸರ ಬೈರಕದಾರ, ವಿಶಾಲಕ್ಷಿ ಹಿರೇಗೌಡ್ರ, ನಗೀನಾ ಯಲಗಾರ, ಪೀರಮ್ಮ ನದಾಫ, ಜೈತುನಬಿ ಶಿರಹಟ್ಟಿ, ಲಕ್ಷ್ಮಿ ಮಣವಡ್ಡರ, ಶೋಭಾ ಹಿರೇಮಠ, ಮಕ್ತುಮಸಾಬ ಮುಲ್ಲಾನವರ ಮುಂತಾದವರಿದ್ದರು.

ಸುಭದ್ರ ದೇಶ ನಿರ್ಮಾಣಕ್ಕೆ ಮುಂದಾಗಿ : ಸುರೇಶ ಕುಂಬಾರ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ, ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ನಮ್ಮದಾಗಿದ್ದು, ದೇಶದಲ್ಲಿಯ ಜನತೆಗೆ ಸಂವಿಧಾನವು ಮತದಾನ ಎಂಬ ವಿಶೇಷ ಹಕ್ಕನ್ನು ನೀಡಿದೆ. ಸಂವಿಧಾನ ನೀಡಿದ ಈ ಹಕ್ಕನ್ನು 18 ವರ್ಷ ವಯೋಮಿತಿ ಮೀರಿದ ಎಲ್ಲ ಅರ್ಹ ಮತದಾರರು ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಚಲಾಯಿಸಬೇಕು. ಎಲ್ಲ ಅರ್ಹ ಮತದಾರರು ಚುನಾವಣೆಯ ದಿನ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶ ನಿರ್ಮಿಸೋಣ ಎಂದರು.

ಕೃಷಿ ಇಲಾಖೆಯ ಯಲ್ಲಪ್ಪ ಬಂಗಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೀರಿಗಾಗಿ ಜಕ್ಕಲಿ ಗ್ರಾ.ಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್‌ನ ನೂರಾರು ನಿವಾಸಿಗಳು ಬದು ನಿರ್ಮಾಣ ಕೆಲಸ ಮುಗಿಸಿ ಖಾಲಿ ಕೊಡ ಹಿಡಿದು ಗ್ರಾ.ಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕುಬೇರಪ್ಪ ಕೊಡಗಾನೂರ ಮಾತನಾಡಿ, ನಮ್ಮ ವಾರ್ಡಿನಲ್ಲಿ ಕಳೆದ ಆರು ತಿಂಗಳಿಂದ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುತ್ತಾ ಇದ್ದೇವೆ. ಈ ಬಗ್ಗೆ ಹಲವಾರು ಬಾರಿ ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ತಕ್ಷಣವೇ ನಮಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಪಂಚಾಯಿತಿಗೆ ಆಗಮಿಸುತ್ತಿದ್ದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಸ್.ಎಸ್. ರಿತ್ತಿ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ನಿವಾಸಿಗಳ ಸಮಸ್ಯೆಯನ್ನು ಆಲಿಸಿದ ಪಿಡಿಓ, ನಿಮಗಾದ ತೊಂದರೆಯನ್ನು ವಾರ್ಡಿನ ಸದಸ್ಯರೊಂದಿಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿತ್ತೇನೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಬಸವ್ವ ಕೊಡಗಾನೂರ, ಸಜನಾ ಜಕ್ಕಲಿ, ಯಲ್ಲಮ್ಮ ಡಂಬಳ, ಮಮ್ಮಸಾಬ ಬಾಲೇಸಾಬನವರ, ಮಾಬಮ್ಮ ಕಳಕಾಪೂರ, ಮಮತಮ್ಮ ಬಾಲೇಸಾಬನವರ, ಖಾಶಿಂಬಿ ಜಾಲಿಹಾಳ, ದಾವಲಮ್ಮ ಗಡಾದ, ಮಮ್ಮಸಲೀಂ ಜಕ್ಕಲಿ, ಉಮೇಶ ಕೊಡಗಾನೂರ, ಇಸ್ಮಾಯಿಲ್ ಗಡಾದ, ಹನುಮಂತ ಕೊಡಗಾನೂರ, ಮೌಲುಸಾಬ ನದಾಫ್, ಆನಂದ ಬಾರಕೇರ, ಯಲ್ಲಪ್ಪ ಮುಕ್ಕಣ್ಣವರ, ಯಮನೂರ ಮಾದರ, ಯಲ್ಲಪ್ಪ ಬಾರಕೇರ, ರಾಜಾಸಾಬ್ ನಮಾಜಿ, ಬಾಬುಸಾಬ ಯಲಬುರ್ಗಿ ಮುಂತಾದವರಿದ್ದರು.

 

ಸತ್ಕಾರ್ಯಗಳಿಂದ ಸಮಾಜಕ್ಕೆ ಶಕ್ತಿ : ಶ್ರೀ ರಂಭಾಪುರಿ ಜಗದ್ಗುರುಗಳು

0
ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಸಮಾಜದಲ್ಲಿ ರಚನಾತ್ಮಕ ಮತ್ತು ಗುಣಾತ್ಮಕ ಕಾರ್ಯಗಳು ಯಾವಾಗಲೂ ನಡೆಯಬೇಕು. ಸತ್ಕಾರ್ಯಗಳಿಂದ ಸಮಾಜಕ್ಕೆ ಹೆಚ್ಚು ಬಲ ದೊರಕಲು ಸಹಕಾರಿಯಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಕನಕಗಿರಿಯಲ್ಲಿ ನಿರ್ಮಾಣಗೊಂಡ ಶ್ರೀ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಸಮುದಾಯ ಭವನದ ವಾಸ್ತು ಶಾಂತಿ ಪೂಜಾ ವಿಧಾನ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು.
ಪರಮ ತಪಸ್ವಿ ಲಿಂ.ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಸತ್ಯ ಸಂಕಲ್ಪ ಸಾಕಾರಗೊಂಡ ಸಂತೃಪ್ತಿ ಮನೋಭಾವ ನಮಗಿದೆ. ಮೂಲ ಸ್ಥಳ ದಾನಿಗಳಾದ ಹಂಪಣ್ಣ ಜೋಡಗಾಣದ, ಬಸೆಟ್ಟೆಪ್ಪ ಭತ್ತದ, ಮುದಕಪ್ಪ ಶೆಟ್ಟರ, ಗುಂಡದಮಠ ಕಂಪ್ಲಿ, ಲಕ್ಷ್ಮಣಪ್ಪ ಕನಕಪ್ಪ ಖ್ಯಾಡೆದ ದಾನ ಮಾಡಿದ ನಿವೇಶನದಲ್ಲಿ ಶ್ರೀ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಸಮುದಾಯ ಭವನ ಭವ್ಯವಾಗಿ ನಿರ್ಮಾಣಗೊಂಡಿರುವುದು ದಾನಿಗಳವರ ಪರಿವಾರದವರಿಗೆ ಆತ್ಮ ಸಂತೃಪ್ತಿ ಉಂಟಾಗಿದೆ ಎಂದರು.
ಸೊರಬ ತಾಲೂಕಿನ ತೆಲಗುಂದ ಹಿರೇಮಠದ ವೇ.ಗುರುಶಾಸ್ತಿç ಮತ್ತು ಲಕ್ಷ್ಮೇಶ್ವರದ ಹಾಲೇವಾಡಿಮಠ ಶಿವಲಿಂಗಯ್ಯ ಶಾಸ್ತಿçಗಳವರ ವೈದಿಕತ್ವದಲ್ಲಿ ಪೂಜಾ ಕಾರ್ಯಗಳು ಜರುಗಿದವು.
ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು, ಸುವರ್ಣಗಿರಿ ಮಠದ ಡಾ.ಚನ್ನಮಲ್ಲ ಸ್ವಾಮಿಗಳು, ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಕುಷ್ಟಗಿ ಮದ್ದಾನಿ ಮಠದ ಕರಿಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು, ಸಿಂಧನೂರು ಕನ್ನೂರಿನ ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಕೆಂಭಾವಿ ಚನ್ನಬಸವ ಶಿವಾಚಾರ್ಯ ಸ್ವಾಮಿಗಳು ಹಾಗೂ ಹೆಬ್ಬಾಳದ ಶಿವಪ್ರಕಾಶ ಶರಣರು ಪಾಲ್ಗೊಂಡು ವೀರಶೈವ ಧರ್ಮ ಸಂಸ್ಕೃತಿ ಮತ್ತು ಗುರು ಪರಂಪರೆಯ ಮಹತ್ವವನ್ನು ವಿವರಿಸಿದರು.
ಚನಬಸಯ್ಯ ಹಿರೇಮಠ, ಸಂಗಪ್ಪ ಸಜ್ಜನ ಸಹೋದರರು, ಡಾ. ಗುರುಮೂರ್ತಿ, ಮಹಾಬಲೇಶ್ವರಪ್ಪ ಸಜ್ಜನ, ಗುರುಸಿದ್ಧಪ್ಪ ಹಾದಿಮನಿ, ಶೇಖರಗೌಡ ಪಾಟೀಲ, ಬಸವರಾಜ ಸಜ್ಜನ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
error: Content is protected !!