ಕೋಲಾರ: ಕೋಲಾರ ಜಿಲ್ಲೆ ಮಾಲೂರು ಪಟ್ಟದ ಗಾಂಧಿ ಸರ್ಕಲ್‌ನಲ್ಲಿ ಇಂದು ದುರಂತ ಸಂಭವಿಸಿದೆ.
ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಗಂಡು ಮಗು ವಿಜಯೇಂದ್ರ ಮೃತಪಟ್ಟಿದ್ದಾನೆ.
ಘಟನೆ ನಡೆದ ದಿನ ಆಟವಾಡುವಾಗ ಮಗು ಬೆಟ್ಟದ ನೆಲ್ಲಿಕಾಯಿ ನುಂಗಿದೆ. ಈ ವೇಳೆ ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ದುರದೃಷ್ಟವಶಾತ್ ಗಂಟಲಲ್ಲಿ ಸಿಲುಕಿದ್ದ ನೆಲ್ಲಿಕಾಯಿ ಹೊರ ತೆಗೆಯಲಾಗದೇ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು,
ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



