ಪಿತ್ರಾರ್ಜಿತ ಆಸ್ತಿಗಾಗಿ ಪ್ರಾಣವನ್ನೇ ಕಳೆದುಕೊಂಡ 20 ವರ್ಷದ ಯುವಕ!

0
Spread the love

ನೆಲಮಂಗಲ:- ಯುವಕನೋರ್ವ ಪಿತ್ರಾರ್ಜಿತ ಆಸ್ತಿಗಾಗಿ ಮನನೊಂದು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ.

Advertisement

ಬಿಎ ಓದಿಕೊಂದಿದ್ದು ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ 20 ವರ್ಷದ ಪೃಥ್ವಿ ಮೃತ ಯುವಕ ಎಂದು ಗುರುತಿಸಲಾಗಿದೆ.

ಅಜ್ಜಿ ಕುಳಯಮ್ಮ ಮತ್ತಿಕೆರೆಯ ಮನೆಯೊಂದನ್ನ ತನ್ನ ಮಗನ ಮಕ್ಕಳಿಗೆ ಆಸ್ತಿ ಕೊಡದೆ ಹೆಣ್ಣು ಮಗಳಿಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಸಂಬಂಧಿಕರನ್ನ ಸೇರಿಸಿ ಮಾತುಕತೆ ಮಾಡಲಾಗಿದ್ದು, ಆದರೆ ಮಾತುಕತೆ ವಿಫಲವಾಗಿದೆ.

ಈ ಘಟನೆಯಿಂದ ಮನನೊಂದ ಪೃಥ್ವಿ, ಮನೆಯ ಕೋಣೆಯಲ್ಲಿ ವೇಲ್​ ಬಳಸಿ ಪ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here