ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಜರುಗಿದೆ.
ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತಿಮ್ಮಲಾಪುರ ಗ್ರಾಮದ ಬಳಿ ಚಿರತೆಗೆ ವಾಹನ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಚಿರತೆ ಸಾವನ್ನಪ್ಪಿರುವುದು ಗೊತ್ತಾಗಿದೆ.
ಘಟನೆ ಸಂಬಂಧ ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.



