ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
Advertisement
ಮನೋಜ್ ಕುಮಾರ್ (10) ಮೃತ ದುರ್ದೈವಿಯಾಗಿದ್ದು, ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು,
ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಹಲವಾರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ, ಯುವತಿಯರು ಹೃದಯಾಘಾತದಿಂದ ಬಲಿಯಾಗುತ್ತಿದ್ದಾರೆ.