ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಮಿತಿ ಮೀರಿದ್ದು, ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಮತ್ತೊಂದೆಡೆ, ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ಶಂಕಿತ ಡೆಂಗ್ಯೂವಿನಿಂದ 5 ವರ್ಷದ ಬಾಲಕ ಮೃತಪಟ್ಟ ಘಟನೆ ಜರುಗಿದೆ. 5 ವರ್ಷದ ಪ್ರದೀಪ್ ಆಚಾರಿ ಮೃತ ಬಾಲಕ. ಒಂದು ವಾರದಲ್ಲಿ ಸಿದ್ದಮ್ಮನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.
Advertisement
ಪ್ರತೀ ನಿತ್ಯ ಸೋಂಕಿತರು ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದರೂ ಪಂಚಾಯ್ತಿ ಅಧಿಕಾರಿಗಳು ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.