ವಿಜಯನಗರ: ವೈದ್ಯರ ನಿರ್ಲಕ್ಷ್ಯದಿಂದ 5 ವರ್ಷದ ಗಂಡು ಮಗು ಸಾವನ್ನಪ್ಪಿರುವ ಘಟನೆ . ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಕುಶಾಲ್( 05) ಮೃತಪಟ್ಟ ಮಗುವಾಗಿದ್ದು, ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್ ಜ್ವರದಿಂದ ಬಳಲುತ್ತಿದ್ದ. ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ.
ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು.
ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.