• About
  • Advertise
  • Privacy & Policy
  • Contact
Sunday, October 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

Vijaya Sakshi by Vijaya Sakshi
October 25, 2026
in Bengaluru News
0
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
0
SHARES
1
VIEWS
Share on FacebookShare on Twitter

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿ ಡೀಲ್ ನಡೆದಿದೆ ಎಂದು ಅವರು ಆರೋಪಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬವನ್ನು ಮುಗಿಸುವ ಉದ್ದೇಶದಿಂದ ಡೀಲ್ ನಡೆದಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ ಅವರು, ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದರು.

ಪೊಲೀಸ್ ಅಧಿಕಾರಿಗಳ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ತನಿಖೆಯನ್ನು ಪ್ರಾಮಾಣಿಕವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಐದು ದಿನಗಳ ಕಾಲಾವಕಾಶ ನೀಡಿದ ಕುಮಾರಸ್ವಾಮಿ:

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ದೂರಿದರು. ತನಿಖೆಯ ಪ್ರಗತಿಯನ್ನು ಗಮನಿಸಲು ಐದು ದಿನಗಳ ಕಾಲಾವಕಾಶ ನೀಡುವುದಾಗಿ ಹೇಳಿದ ಅವರು, ತಮ್ಮ ಪಕ್ಷದ ಕಾರ್ಯಕರ್ತರು ಯಾರೂ ಭಯಪಡುವ ಅಗತ್ಯವಿಲ್ಲ ಎಂದರು.

ವಿಚಾರಣೆಗೆ ಹಾಜರಾಗುವಂತೆ ವಾರ್ ರೂಮ್ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರಿಗೆ ಸೂಚಿಸಿರುವುದಾಗಿ ತಿಳಿಸಿದರು. ತಮ್ಮ ಕಾರ್ಯಕರ್ತರು ತಲೆಮರೆಸಿಕೊಂಡಿಲ್ಲ, ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ವಿಕ್ಕಿ ಪ್ರಕರಣದ ಬಗ್ಗೆಯೂ ಪ್ರಶ್ನೆ:

ವಿಕ್ಕಿ ಪ್ರಕರಣವನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕಚೇರಿಯ ಲಿಫ್ಟ್ ಹೇಗೆ ತೆರೆದಿತ್ತು, ಘಟನೆ ಸಂಭವಿಸಲು ಕಾರಣವೇನು ಮತ್ತು ಇದರಲ್ಲಿ ಅಧಿಕಾರಿಗಳ ಪಾತ್ರವಿದೆಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು. ಪ್ರಕರಣವನ್ನು ಯುಡಿಆರ್ ಅಡಿಯಲ್ಲಿ ಮುಕ್ತಾಯಗೊಳಿಸಿರುವುದರ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿ, ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಕೋಲಾರದ ಸಮೀಪ ನಡೆದ ಚಾಲಕನ ಕೊಲೆ ಪ್ರಕರಣವನ್ನೂ ಪ್ರಸ್ತಾಪಿಸಿದ ಅವರು, ಅನುಮಾನಾಸ್ಪದ ಘಟನೆಗಳ ಹಿಂದಿನ ಸತ್ಯ ಹೊರಬರಲು ತನಿಖೆ ಅಗತ್ಯ ಎಂದು ಹೇಳಿದರು.

ವೈರಲ್ ವಿಡಿಯೋಗಳ ಕುರಿತು ತನಿಖೆಗೆ ಒತ್ತಾಯ:

ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು. ಸಾಕ್ಷ್ಯಗಳಿದ್ದರೆ ಒದಗಿಸುವಂತೆ ಗೃಹ ಸಚಿವರು ಹೇಳುತ್ತಿರುವುದನ್ನು ಪ್ರಶ್ನಿಸಿದ ಅವರು, ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ನ್ಯಾಯಯುತ ತನಿಖೆ ನಡೆಸಬೇಕು. ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಸಂಬಂಧಿಸಿದ ವಿಡಿಯೋಗಳಿವೆ ಎಂಬ ಮಾಹಿತಿಯೂ ಇದೆ ಎಂದರು.

ತಮ್ಮ ಪಕ್ಷದ ಕಾರ್ಯಕರ್ತರ ಬ್ಯಾಂಕ್ ಖಾತೆಗಳ ವಿವರಗಳನ್ನು ಕೇಳುತ್ತಿರುವುದರ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ತಪ್ಪು ಮಾಡಿದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪಕ್ಷಪಾತವಿಲ್ಲದೆ ನಡೆಯಬೇಕು ಎಂದು ಒತ್ತಾಯಿಸಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ. ₹600 ಕೋಟಿ ಡೀಲ್ ಆರೋಪ ಸೇರಿದಂತೆ ಅವರು ಪ್ರಸ್ತಾಪಿಸಿರುವ ವಿವಿಧ ವಿಚಾರಗಳ ಸತ್ಯಾಸತ್ಯತೆ ತನಿಖೆಯಿಂದ ಸ್ಪಷ್ಟವಾಗಬೇಕಿದೆ.

Tags: HD Deve GowdaHD KumaraswamykannadanewsKarnatakaSting Operation CaseVijayasakshivijayasakshinews₹600 Crore Deal
Previous Post

Breaking News: ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು!

Next Post

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

October 25, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

October 25, 2026
Breaking News: ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು!

Breaking News: ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು!

October 25, 2026
ಬರ ಎದುರಿಸಲು ₹224 ಕೋಟಿ ಬಿಡುಗಡೆ: ಕುಡಿಯುವ ನೀರಿಗೆ ಹಣದ ಕೊರತೆಯಿಲ್ಲ ಎಂದ ಈಶ್ವರ್ ಖಂಡ್ರೆ

ಡಿಸೆಂಬರ್ ಅಥವಾ ಜನವರಿಯಲ್ಲಿ ಪಂಚಾಯಿತಿ ಚುನಾವಣೆ? ಈಶ್ವರ ಖಂಡ್ರೆ ಹೇಳಿದ್ದೇನು?

October 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

October 25, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

October 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link