ಚಿಕ್ಕಬಳ್ಳಾಪುರ:- ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.
Advertisement
24 ವರ್ಷದ ಇರ್ಫಾನ್ ಅತ್ಯಾಚಾರ ಎಸಗಿದ ಆರೋಪಿ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ವೃದ್ಧೆ ಇದ್ದಾಗ, ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಆರೋಪಿಯನ್ನು ಚಿಂತಾಮಣಿಯ ಹೈದರಾಲಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಅಸ್ವಸ್ಥ ವೃದ್ಧೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.