HomeGadag Newsವಾಕಿಂಗ್ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ; ಕೃಷಿ ಇಲಾಖೆಯ ನೌಕರ ಸ್ಥಳದಲ್ಲೇ ಸಾವು

ವಾಕಿಂಗ್ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ; ಕೃಷಿ ಇಲಾಖೆಯ ನೌಕರ ಸ್ಥಳದಲ್ಲೇ ಸಾವು

For Dai;y Updates Join Our whatsapp Group

Spread the love

ಗದಗ: ವಾಕಿಂಗ್ ವೇಳೆ ಪಾದಚಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೃಷಿ ಇಲಾಖೆಯ ಎಫ್‌ಡಿಎ (ಪ್ರಥಮ ದರ್ಜೆ ಸಹಾಯಕ) ಸುನೀಲ್ ದಾಸರ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬುಧವಾರ ರಾತ್ರಿ ಗದಗ ನಗರದಲ್ಲಿ ನಡೆದಿದೆ.

ನಗರದ ದೋಭಿಘಾಟ್ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ದಾಸರ್ ಅವರು ವಾಕಿಂಗ್ ಮಾಡುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ತೀವ್ರತೆಗೆ ಸುನೀಲ್ ದಾಸರ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಗದಗ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!