ಹಾವೇರಿ: ಕಾಡುಹಂದಿ ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ತಿನ್ನುವ ವೇಳೆ ಸ್ಫೋಟಗೊಂಡು ಮ್ಮೆ ತೀವ್ರವಾಗಿ ಗಾಯಗೊಂಡಿದ್ದು, ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೊಸಕೊಪ್ಪದಲ್ಲಿ ನಡೆದಿದೆ.
Advertisement
ರೈತ ಬಾಷಾಸಾಬ್ ಬಂಕಾಪುರಗೆ ಸೇರಿದ ಎಮ್ಮೆಯಾಗಿದ್ದು, ಕಾಡು ಹಂದಿ ಬೇಟೆಗಾಗಿ ಬೇಟೆಗಾರರು ಇಟ್ಟಿದ್ದ ಕಚ್ಚಾ ನಾಡಬಾಂಬ್ ಸೇವಿಸಿ ಈ ದುರ್ಘಟನೆ ನಡೆದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ದನಗಳು ಮೇಯಿಸಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಚ್ಚಾ ನಾಡಬಾಂಬ್ ಇಟ್ಟವರ ಮೇಲೆ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ. ಎಮ್ಮೆ ಕಳೆದುಕೊಂಡ ಬಡ ರೈತನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಗಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.