ಬಳ್ಳಾರಿ:- ಕುರಿ ಮೇಯಿಸಿಲು ಹೋಗಿದ್ದ ಬಾಲಕ ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಜರುಗಿದೆ.
Advertisement
13 ವರ್ಷದ ವೀರೇಶ್ ಮೃತ ಬಾಲಕ. ಕುರಿ ಮೇಯಿಸಿಲು ಹೋಗಿದ್ದ ವೀರೇಶ್ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾಲಕ ವೀರೇಶ್ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.