HomeBengaluru NewsPOP ಗಣೇಶ ಮೂರ್ತಿಗಳಿಗೆ ಬ್ರೇಕ್? ಸಚಿವರಿಗೆ ಸುರೇಶ್ ಕುಮಾರ್ ತುರ್ತು ಪತ್ರ!

POP ಗಣೇಶ ಮೂರ್ತಿಗಳಿಗೆ ಬ್ರೇಕ್? ಸಚಿವರಿಗೆ ಸುರೇಶ್ ಕುಮಾರ್ ತುರ್ತು ಪತ್ರ!

For Dai;y Updates Join Our whatsapp Group

ಬೆಂಗಳೂರು: ಗಣೇಶೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಮಾರುಕಟ್ಟೆಯಲ್ಲಿ POP ಗಣೇಶ ಮೂರ್ತಿಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಜಲಮೂಲಗಳು ಮತ್ತು ಪರಿಸರಕ್ಕೆ ಹಾನಿಯಾಗುವುದಲ್ಲದೆ, ಗಣೇಶನ ಮೇಲಿನ ಸಾಂಪ್ರದಾಯಿಕ ಶ್ರದ್ಧೆ ಹಾಗೂ ಪಾವಿತ್ರ್ಯಕ್ಕೂ ಧಕ್ಕೆಯಾಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವಂತೆ ಹಾಗೂ POP ಮೂರ್ತಿಗಳನ್ನು ತ್ಯಜಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದನ್ನು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಈಗಾಗಲೇ ಜೂನ್ 29 ಹಾಗೂ ಜುಲೈ 12ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದು ಗಮನ ಸೆಳೆಯಲಾಗಿತ್ತು. ಜುಲೈ 13ರಂದು ಉತ್ತರ ನೀಡುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ POP ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img