ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದು ಹೆಚ್ಚಾಗಬಹುದು. ಹೆಚ್ಚಾದರೆ ಪೂರಕ ಬಜೆಟ್‌ನಲ್ಲಿ ಸೇರಿಸಿಕೊಳ್ತೀವಿ.
Advertisement
ಗ್ಯಾರಂಟಿಯಿಂದ ರಾಜ್ಯದ ಬೊಕ್ಕಸ ಖಾಲಿ ಆಯ್ತು ಅಂತ ವಿಪಕ್ಷಗಳು ಆರೋಪ ಮಾಡುತ್ತಿವೆ. ಇದರಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿಗೆ ಹಣ ಇದೆ, ರಾಜ್ಯದಲ್ಲಿ ಈ ವರ್ಷ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಆಗಿದೆ. ಇದರಲ್ಲಿ 1.20 ಲಕ್ಷ ಕೋಟಿ ರೂ. ಅಭಿವೃದ್ಧಿಗೆ ಬಳಕೆ ಮಾಡ್ತಿದ್ದೇವೆ. ಇನ್ನೂ ಈ ಬಾರಿ 14 ಸಾವಿರ ಕೋಟಿ ರೂ. ವಿತ್ತೀಯ ಕೊರತೆ ಆಗಿದ್ದು, ಅನಗತ್ಯ ಖರ್ಚಿಗೆ ಕಡಿವಾಣ ಹಾಕಿ, ಸರಿ ದೂಗಿಸುತ್ತೇವೆ ಎಂದು ಸಿಎಂ ಹೇಳಿದರು.