Home Karnataka News ಭದ್ರಪ್ಪ ಲೇಔಟ್ ಬಳಿ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ!

ಭದ್ರಪ್ಪ ಲೇಔಟ್ ಬಳಿ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ!

0
ಭದ್ರಪ್ಪ ಲೇಔಟ್ ಬಳಿ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ!
Spread the love

ಬೆಂಗಳೂರು:- ಭದ್ರಪ್ಪ ಲೇಔಟ್ ಸಮೀಪ ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಂಪನಿಯ ಬಸ್ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ವೇಳೆ ಕೆಲ ಉದ್ಯೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಈ ಸಂಬಂಧ ಸಂಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here