ಬೀದರ್:- ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ಜರುಗಿದೆ.
ಜಗನ್ನಾಥ್, ಪತ್ನಿ ರೇಣುಕಾ ಹಾಗೂ ಮಗ ವಿನೋದ್ ಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಜಮೀನಿನಿಂದ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ.
ಸಧ್ಯ ಬೀದರ್ನ ಜಿಲ್ಲಾಸ್ಪತ್ರೆಗೆ 3 ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.



