Road Accident: ಡಿವೈಡರ್​ಗೆ ಕಾರು ಡಿಕ್ಕಿ, ಓರ್ವ ಸಾವು!

0
Spread the love

ಚಿತ್ರದುರ್ಗ:- ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್​ಗೆ ಡಿಕ್ಕಿ ಆದ ಬಳಿಕ ಕಾರು ಪಕ್ಕದ ರಸ್ತೆಗೆ ಬಿದ್ದಿದ್ದು ಎದುರಿನ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈವರೆಗೆ ಮೃತರ ಗುರುತು ತಿಳಿದು ಬಂದಿಲ್ಲ. ರಾಂಪುರ ಠಾಣೆ ಪಿಎಸ್​ಐ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here