ಬೆಂಗಳೂರು:- ದೇವನಹಳ್ಳಿ ಸಮೀಪದ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ಹಿಟ್ ಅಂಡ್ ರನ್‌ಗೆ ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ.
31 ವರ್ಷದ ನೇತ್ರಾವತಿ ಮೃತ ಮಹಿಳೆ. ನೇತ್ರಾವತಿ ಹಾಗೂ ಪತಿ ಬೈಕಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಒನ್ ವೇನಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ನೇತ್ರಾವತಿ ಫ್ಲೈಓವರ್ ಕೆಳಗೆ ಬಿದ್ದಿದ್ದಾರೆ. ಫ್ಲೈಓವರ್ ಮೇಲಿಂದ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ನೇತ್ರಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬೈಕ್‌ನ ಎಡಭಾಗಕ್ಕೆ ಬಿದ್ದು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಮಾಡಿ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ದೇವನಹಳ್ಳಿ ಸಂಚಾರಿ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.



