ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 10ರ ಬಾಲಕನ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಅಗಸ್ತ್ಯ ಕನಮಡಿ (10) ಮೃತ ದುರ್ದೈವಿ ಬಾಲಕ. ಈತ ಅಥಣಿ ತಾಲೂಕಿನ ರಡ್ಡೆರಟ್ಟಿ ಗ್ರಾಮದ ನಿವಾಸಿ ಎನ್ನಲಾಗಿದೆ. ಮೃತ ಬಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಕಾರೊಂದು ಬಾಲಕನ ಮೇಲೆ ಹರಿದು ಹೋಗಿದೆ.
ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿ ರಾಹುಲ್ ಹುಂಡೇಕರ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



