ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂಭಾಗ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೆಂಕಿಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಿಎಂ ನಿವಾಸದ ಬಳಿ ನಿಲ್ಲಿಸಿದ್ದ ಕಾರಿನ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ.
Advertisement
ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಚಾಲಕ ಮತ್ತು ಮಾಲೀಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. 2009ರ ಮಾಡೆಲ್‍ನ ಫಿಯೇಟ್ ಕಾರು ಇದಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.


