ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ಹೊರ ವಲಯದ ಕೆದಕಲ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ನೆಲಕ್ಕೆ ಬಿದ್ದಿದ್ದಾನೆ.
ಎಸ್, ಕೆದಕಲ್ ಭದ್ರಕಾಳಿ ದೇವಾಲಯದ ಸಮೀಪದ ತಿರುವಿನಲ್ಲಿ ಕಾರೊಂದು ಓವರ್ ಟೇಕ್ ಮಾಡುವ ಬರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಗೆ ಕಾರು ತಗುಲಿದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಚಾಲಕ ರಸ್ತೆಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಬೈಕ್ ಚಾಲಕನನ್ನ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.



