ಬೆಂಗಳೂರು: ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ. ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ. ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ನಾನು ಹೋಗಿದ್ದಾಗ ಜನರು ಹೇಳಿದ್ದನ್ನು ಟ್ವೀಟ್ ಮಾಡಿದ್ದೇನೆ.
ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಎಂದು ಕೂಗಿಲ್ಲ ಎಂದರು. ಹಾಗಾದರೆ ನಿಮ್ಮ ಮೇಲೆ ಯಾಕೆ FIR ಹಾಕಬಾರದು? ವಿಪಕ್ಷ ನಾಯಕನಾಗಿ ತನಿಖೆ ಮಾಡಿ ಅಂತಾನೂ ಹೇಳಬಾರದ? ಬಾಯಿ ಮುಚ್ಚಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಪಕ್ಷ ಬಾಯಿ ಮುಚ್ಚಿಸಬೇಕು ಅಂತಾ ಇವರು ತೀರ್ಮಾನಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಈ ಬಗ್ಗೆ ಹೋರಾಟ ಮಾಡಲು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಾಗಿದೆ. ರಾಜ್ಯಪಾಲರ ಮೇಲೂ ಕಾಂಗ್ರೆಸ್ಸಿಗರು ಗದಾಪ್ರಹಾರ ಮಾಡುತ್ತಿದ್ದಾರೆ. ವಿವಿಗಳಲ್ಲಿ ರಾಜ್ಯಪಾಲರ ಅಧಿಕಾರ ಕಸಿಯುವ ಪ್ರಯತ್ನ ಮಾಡ್ತಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.