ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣ ರಾಜ್ಯ ಬಿಜೆಪಿಯಲ್ಲಿ ಕಂಪನ ಸೃಷ್ಟಿಸಿದೆ.
Advertisement
ಹಿಂದೂ ಸಂಘಟನೆಗಳಲ್ಲಿ ಗುರಿತಿಸಿಕೊಂಡ ಚೈತ್ರಾ ಸೇರಿದಂತೆ ಹಲವರ ಬಂಧನವಾಗಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಮತ್ತೊಂದು ಇದೇ ಮಾದರಿಯ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ 2.55 ಕೋಟಿ ರೂಪಾಯಿ ವಂಚನೆ ವಂಚನೆ ಮಾಡಿದ ಪ್ರಕರಣ ಬಯಲಿಗೆ ಬಂದಿದೆ.