ದೊಡ್ಡಬಳ್ಳಾಪುರ: ಬೈಕ್ʼಗೆ ಹಿಂಬದಿಯಿಂದ ಬಂದ ಸಿಮೆಂಟ್ ಬಲ್ಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದೊಡ್ಡಬಳ್ಳಾಪುರದ ಗೊಲ್ಲಹಳ್ಳಿ ಬಳಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಮೂಲದವರಾದ ಬಾಬು (35) ಮೃತ ದುರ್ದೈವಿಯಾಗಿದ್ದು,
Advertisement
ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಬಾಬು ಸಾವನ್ನಪ್ಪಿದ್ದಾರೆ. ಇನ್ನೂ ಗಾಯಾಳನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.