ವಿಜಯನಗರ: ಆಟ ಆಡುವಾಗ ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ವಿಸ್ಮೀತ( 3) ಮೃತಪಟ್ಟ ಬಾಲಕಿಯಾಗಿದ್ದು,. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ.
Advertisement
ನಾಗರಾಜ್ ಮತ್ತು ಕಾವೇರಿ ದಂಪತಿಯ ಮಗಳಾದ ವಿಸ್ಮೀತಾ ಆಟವಾಡುತ್ತಾ ನೀರಿನ ತೊಟ್ಟಿ ಬಳಿ ಬಂದಿದ್ದಾಳೆ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ಕೂಡ್ಲಿಗಿ ಶಾಸಕ ಎನ್.ಟಿ ಶ್ರೀನಿವಾಸ್ ಮೃತ ಬಾಲಕಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.