HomeGadag Newsಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗಲೇ ದೇಶದ ಅಭಿವೃದ್ಧಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗಲೇ ದೇಶದ ಅಭಿವೃದ್ಧಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣ ಇಲಾಖೆಯಲ್ಲಿ ಕಳೆದ ಬಾರಿಗಿಂತ ಹಾಜರಾತಿ ಕಡಿಮೆ ಇದ್ದ ಶಾಲೆಗಳ ಬಗ್ಗೆ ಗಮನ ವಹಿಸಿ ಮಕ್ಕಳನ್ನು ಶಾಲೆಗೆ ಕರೆತರತಂದು, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಸೂಚಿಸಿದರು.

ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ಶೇ. 97 ಮಕ್ಕಳ ಹಾಜರಾತಿ ಕಡ್ಡಾಯ ಇರುವಂತೆ ಶಿಕ್ಷಕರು ಮುತುವರ್ಜಿ ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಕಡಿಮೆ ಆಗಿರಬಹುದು. ಆದರೆ ಮಕ್ಕಳಿಗೆ ನಕಲು ಮಾಡಲು ಬಿಟ್ಟುಕೊಟ್ಟಿಲ್ಲ. ಶಿಕ್ಷಕರ ಮೂಲಕ ಮಕ್ಕಳಿಗೆ ಮೇಲಿಂದ ಮೇಲೆ ಪರೀಕ್ಷೆಗಳನ್ನು ನಡೆಸಿ, ಮಕ್ಕಳು ಸ್ವಂತ ಬಲದಿಂದ ಬರೆಯುವಂತೆ ನೋಡಿಕೊಳ್ಳಲಾಯಿತು. ಹಾಗಾಗಿ ಫಲಿತಾಂಶ ಕಡಿಮೆ ಬಂದರೂ ಉತ್ತಮ್ಮ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು.

ಎಲ್ಲ ಶಾಲೆಗಳಲ್ಲಿಯೂ ಮಕ್ಕಳು ಸಂವಿಧಾನ ಪೀಠಿಕೆಯನ್ನು ಓದುವಂತೆ ನೋಡಿಕೊಳ್ಳಬೇಕು. ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ, ಸಮವಸ್ತ್ರ ವಿತರಣೆಯಾಗಿರುವ ಕುರಿತು ನಿಗಾ ವಹಿಸಬೇಕು. ಶಾಲಾ ಕೊಠಡಿಗಳ ದುರಸ್ತಿ, ಹೊಸ ಕಟ್ಟಡಗಳಿಗೆ ಅನುದಾನ ಸಿಗಬೇಕು ಎಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಗಿಂತ ಅಧಿಕ ಅನುದಾನವನ್ನು ಶಿಕ್ಷಣ ಇಲಾಖೆಗೆ ನೀಡಿದ್ದಾರೆ ಎಂದು ಹೇಳಿದರು.

ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಮಾತನಾಡಿ, ಜುಲೈ ತಿಂಗಳೊಳಗಾಗಿ ಪ್ರವೇಶ ಪ್ರಕ್ರಿಯೆ ಅಧಿಕಗೊಳ್ಳಬೇಕು. ಶಾಲಾ ಶೌಚಾಲಯಗಳ ಕಡಿಮೆ ದುರಸ್ತಿಗೆ 5 ಕೋಟಿಗೂ ಅಧಿಕ ಹಣ ಬೇಕು. ಪೂರ್ಣ ದುರಸ್ತಿಗೆ 26 ಕೋಟಿ ಅಗತ್ಯವಿದೆ. ಹಾಗಾಗಿ, ದುರಸ್ತಿಗೆ ಶೇ. 50ರಷ್ಟು ಅನುದಾನ ನೀಡಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಲ್ಲಿ ಕೋರಿದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಆದ್ರಳ್ಳಿಯಲ್ಲಿರುವ ಶಾಲೆಯಲ್ಲಿ 650ಕ್ಕೂ ಅಧಿಕ ಮಕ್ಕಳ ದಾಖಲಾತಿಯಿದೆ. ಆ ಶಾಲೆಯನ್ನು ಕೆಪಿಎಸ್ (ಕರ್ನಾಟಕ ಪಬ್ಲಿಕ ಶಾಲೆ) ಮಾಡಬೇಕು ಎಂದು ಸಚಿವರ ಗಮನಕ್ಕೆ ತಂದರು.

ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿಯ ಹಳೆ ಶಾಲಾ ಕಟ್ಟಡಗಳಿಗೆ ಕಾಯಕಲ್ಪ ಆಗಬೇಕಿದೆ. ಫಲಿತಾಂಶ ಸುಧಾರಣೆಗೆ ಒತ್ತು ನೀಡಬೇಕಿದೆ. ಮುಂಡರಗಿ ತಾಲೂಕಾ ಕೇಂದ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಈವರೆಗೂ ಸ್ಥಾಪನೆಯಾಗಿಲ್ಲ. ಶಿಕ್ಷಣ ಸಚಿವರು ಈ ಕುರಿತು ಗಮನ ಹರಿಸಬೇಕು ಎಂದರು.

ವಿ.ಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಸತತ ಮೂರು ವರ್ಷಗಳಿಂದ ಫಲಿತಾಂಶ ಕಡಿಮೆ ಇರುವ ಶಾಲೆಗಳಿಗೆ ನೀಡುವ ಅನುದಾನ ಕಡಿತಗೊಳಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಸಚಿವರಲ್ಲಿ ಕೋರಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, 2025-26ನೇ ಸಾಲಿಗೆ ಜಿಲ್ಲೆಯಲ್ಲಿ 698 ಶಿಕ್ಷಣ ಇಲಾಖೆ, 22 ಸಮಾಜ ಕಲ್ಯಾಣ ಇಲಾಖೆ, 2 ಸ್ಥಳೀಯ ಸಂಸ್ಥೆ, 148 ಅನುದಾನಿತ, 242 ಅನುದಾನ ರಹಿತ, 7 ಇತರೆ ಸರಕಾರಿ, 1 ಕೇಂದ್ರ ಸರಕಾರದ ಶಾಲೆ ಹೀಗೆ ಒಟ್ಟು 1,120 ಶಾಲೆಗಳಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಪ್ರಾದಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಸಿ.ಇ.ಓ ಭರತ್ ಎಸ್, ಅಪರ ಆಯುಕ್ತೆ ಜಯಶ್ರೀ ಶಿಂತ್ರಿ, ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.

ರಾಜ್ಯದಲ್ಲಿ ಸರ್ಕಾರದಿಂದ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕಳೆದ ವರ್ಷ ಕಲ್ಯಾಣ ಕರ್ನಾಟಕದಲ್ಲಿ ಆರಂಭಿಸಲಾಗಿತ್ತು. ಈ ಬಾರಿ ರಾಜ್ಯದ ಉಳಿದ ಭಾಗಗಳಲ್ಲಿ 4000 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ 65 ಎಲ್‌ಕೆಜಿ, ಯುಕೆಜಿಗಳಿಗೆ ಅನುಮೋದನೆ ನೀಡಲಾಗಿತ್ತು. ಇನ್ನೂ ಹೆಚ್ಚಿನ ಅನುಮೋದನೆ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

“ಜಿಲ್ಲೆಯಲ್ಲಿ ಓದಿನ ಮನೆ ಮೂಲಕ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ವಹಿಸಿದೆ. ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಪಿಂಕ್ ಟಾಯ್ಲೆಟ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಎರಡೂ ಯೋಜನೆಗಳು ಉತ್ತಮವಾಗಿದ್ದು, ಅವುಗಳನ್ನು ರಾಜ್ಯಾದ್ಯಂತ ವಿಸ್ತರಿಸಬೇಕು. ಈ ವರ್ಷ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿ ಆಗಸ್ಟ್ 15ರೊಳಗಾಗಿ ಶಾಲಾ ಕೊಠಡಿಗಳು ಬಳಕೆಗೆ ಯೋಗ್ಯವಾಗಿರುವ ಕುರಿತು ಅಧಿಕಾರಿಗಳು ವರದಿ ಸಲ್ಲಿಸಬೇಕು”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!