ಮಡಿಕೇರಿ:- ಖಾಲಿ ಮನೆಯಲ್ಲಿ ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿ ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಜರುಗಿದೆ.
40 ವರ್ಷದ ಸುರೇಶ್, ಹಾಗೂ ಅವರ ಪತ್ನಿ 28 ವರ್ಷದ ಪಲ್ಲವಿ ಮೃತ ದಂಪತಿ. ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.
ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್ ಅವರು ಡೆತ್‌ನೋಟ್ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.
ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



