ರಾಮನಗರ:- ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದ ದನದ ಕೊಟ್ಟಿಗೆಯೊಂದರಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.
Advertisement
34 ವರ್ಷದ ರಾಜು, 30 ವರ್ಷದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎನ್ನಲಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಸದ್ಯ ದಂಪತಿ ಆತ್ಮಹತ್ಯೆಯಿಂದ ಮೂರು ವರ್ಷದ ಹೆಣ್ಣು ಮಗು ಅನಾಥವಾಗಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.