ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕ ಷಡ್ಯಂತ್ರ ಮಾಡಲಾಗುತ್ತಿದೆ.
Advertisement
ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರಕ್ಕೆ ಯತ್ನಿಸುತ್ತಿದ್ದಾರೆ, ಆದ್ರೆ ಅದು ಫಲಿಸಲ್ಲ ಎಂದಿದ್ದಾರೆ. ಇನ್ನೂ ಸಿಎಂ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಏನ್ ಹಕ್ಕಿದೆ.
ಒಂದೇ ಪಕ್ಷ, ಒಬ್ಬನೇ ನಾಯಕ, ಇನ್ನಾರು ದೇಶದಲ್ಲಿರಬಾರದು ಇದು ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಮಾಡ್ತಿದೆ. ಇದೆಲ್ಲಾ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದ ಭಾಗ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.