ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಸೈಕೋಪಾತ್ ಪೈಶಾಚಿಕ ಕೃತ್ಯ ಎಸಗಿದ ಆರೋಪಿಯಾಗಿದ್ದು, ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನೂ 5 ವರ್ಷದ ಬಾಲಕಿ ಹತ್ಯೆ ಖಂಡಿಸಿ, ಆಕ್ರೋಶಗೊಂಡಿರುವ ಬಾಲಕಿ ಪೋಷಕರು ಹಾಗೂ ಸ್ಥಳೀಯರು ಅಶೋಕನಗರ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕನಗರ ಠಾಣೆ ಪೊಲೀಸ್ ತನಿಖೆ ಮುಂದುವರೆಸಿದ್ದು, ಸೈಕೋಪಾತ್ ಬಂಧನಕ್ಕೆ ಜಾಲ ಬೀಸಿದ್ದಾರೆ.