ಬೆಂಗಳೂರು: ಇಡೀ ನಗರವೇ ನಾಚಿಕೆ ಪಡುವಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಹೌದು ನಗರದಲ್ಲಿ ಮಹಿಳೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ನಿನ್ನೆ ರಾತ್ರಿ ಮನೆಗೆ ನುಗ್ಗಿ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದು,
Advertisement
ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಯುವಕರು ಪ್ರಕರಣ ನಂತರ ನಾಪತ್ತೆಯಾಗಿದ್ದಾರೆ, ಅವರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಗೂ ಹಾಗೂ ಈ ಯುವಕರಿಗೂ ಮೊದಲೇ ಪರಿಚಯವಿತ್ತೇ ಎನ್ನುವುದಿನ್ನೂ ದೃಢಪಟ್ಟಿಲ್ಲ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.