ಧಾರವಾಡ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕುಬ್ಜ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಸಿಬಿ ನಗರದಲ್ಲಿರುವ ಲಿಂಗಾಯತ ಭವನದ ಹಿಂಭಾಗದಲ್ಲಿ ನಡೆದಿದೆ. ದೀಪಾ ಪಾಟೀಲ (27) ಎಂಬ ಕುಬ್ಜ ಯುವತಿಯೇ ಆತ್ಮಹತ್ಯೆ ಮಾಡಿಕೊಂಡವಳು.
ಸಂಜೆ ಮನೆಯಿಂದ ಹೊರ ಹೋಗಿದ್ದ ದೀಪಾ, ಲಿಂಗಾಯತ ಭವನದ ಹಿಂಭಾಗದಲ್ಲಿರುವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಟುಂಬದವರು ಆಕೆಗಾಗಿ ಹುಡುಕಾಟ ಸಹ ನಡೆಸಿದ್ದರು. ಆದರೆ, ಲಿಂಗಾಯತ ಭವನದ ಬಳಿ ಇರುವ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.



