ಲೌಕಿಕ ಜೀವನದತ್ತ ಮುಖ ಮಾಡಿದ ಖ್ಯಾತ ನಟಿ

0
Spread the love

ಬಾಲಿವುಡ್ ಹಾಗೂ ದಕ್ಷಿಣ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ಮಮತಾ ಕುಲಕರ್ಣಿ ಇದೀಗ ಲೌಕಿಕ ಜಗತ್ತಿನತ್ತ ಮುಖ ಮಾಡಿದ್ದಾರೆ.

Advertisement

90ರ ದಶಕದಲ್ಲಿ ಬಾಲಿವುಡ್ ಸೇರಿದಂತೆ ಕನ್ನಡ ಸಿನಿಮಾದಲ್ಲಿ ನಟಿಸಿರುವ ಮಮತಾ, ಇದೀಗ ಲೌಕಿಕ ಜೀವನದತ್ತ ಮುಖ ಮಾಡುವ ಮೂಲಕ ಮಹಾಮಂಡಲೇಶ್ವರಿಯಾಗಿದ್ದಾರೆ. ಮಮತಾ ಕುಲಕರ್ಣಿ ಹೆಸರನ್ನು ಬದಲಿಸಿಕೊಂಡು `ಮಾಯಿ ಮಮತಾ ನಂದಗಿರಿ’ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ.

ಮಹಾಕುಂಭಮೇಳದಲ್ಲಿ ಬಾಗಿಯಾಗಿರುವ ನಟಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಬಳಿಕ ತಮ್ಮ ಸ್ವಂತ ಪಿಂಡ ಪ್ರದಾನಮಾಡುವ ಮೂಲಕ ಜೂನಾ ಅಖಾ ಡದ ಅಡಿ ಕಾರ್ಯನಿರ್ವಹಿಸುವ ಕಿನ್ನರ ಅಖಾಡಕ್ಕೆ ಸೇರಿಕೊಂಡಿದ್ದು, ಮಹಾಮಂಡಲೇಶ್ವರರಾಗಿದ್ದಾರೆ. ಇವರಿಗೆ ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮಿ ನಾರಾಯಣ ತ್ರಿಪಾಠಿ ದೀಕ್ಷೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here