ಮಂಡ್ಯ: ಸಾಲಭಾದೆಯಿಂದ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ. ವಿಲೇಶ್(50) ನೇಣಿಗೆ ಶರಣಾದ ರೈತನಾಗಿದ್ದು,
ಬ್ಯಾಂಕ್, ವಿವಿಧ ಸ್ವಸಹಾಯ ಸಂಘ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದರು. ಸಾಲಭಾದೆ ತಾಳಲಾರದೇ ತಮ್ಮ ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



