ಹರಪನಹಳ್ಳಿ: ವರಮಹಾಲಕ್ಷ್ಮೀ ಹಬ್ಬವನ್ನು ಹರಪನಹಳ್ಳಿ ತಾಲೂಕಿನಾದ್ಯಂತ ಶುಕ್ರವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಬೆಳಗಿನ ಜಾವ ಎದ್ದು ಅಭ್ಯಂಜನ ಮಾಡಿ, ಮಡಿ ಸೀರೆ ಉಟ್ಟು ಕಳಸದಲ್ಲಿ ಲಕ್ಷ್ಮೀದೇವಿಯನ್ನು ಆಹ್ವಾನಿಸಿ ಪೂಜಿಸಿದರು. ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಕಾಯಿಗಳ ಬೆಲೆ ಗಗನಕ್ಕೇರಿದರೂ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಕೊರತೆ ಇರಲಿಲ್ಲ.
Advertisement