ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ದೊಣ್ಣೆ, ಕಲ್ಲಿನಿಂದ ಮಾರಾಮಾರಿ; ವಿಡಿಯೋ ವೈರಲ್

0
Spread the love

ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಯುವಕರು ದೊಣ್ಣೆ, ಕಟ್ಟಿಗೆ, ಕಲ್ಲಿನಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಅಧ್ಯಾಪಕ ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯ ವಿಡಿಯೋ ವೈರಲ್ ಆಗಿದ್ದು ಆಘಾತಕಾರಿಯಾಗಿದೆ.

Advertisement

https://www.facebook.com/share/r/1MyWnnau5J/

ಮಕ್ಕಳು ಆಟ ಆಡುವ ವೇಳೆ ಜಗಳ ಮಾಡಿಕೊಂಡಿರುವ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮೊದಲು ಚಿಕ್ಕ ಮಕ್ಕಳು ಹೊಡೆದಾಡಿಕೊಂಡಿದ್ದಾರೆ. ನಂತರ ಎರಡು ಗುಂಪಿನ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದ್ದು,ಮಾತಿಗೆ ಮಾತು ಬೆಳೆದು ಕೈಗೆ ಸಿಕ್ಕ ಕಟ್ಟಿಗೆ, ದೊಣ್ಣೆ, ಕಲ್ಲಿನಿಂದ ಹೊಡೆದಾಡಿಕೊಂಡಿದ್ದಾರೆ.

ಮನೆಗಳ ಕಿಟಕಿ, ಬಾಗಿಲು ಗಾಜು ಸಹ ಧ್ವಂಸ ಮಾಡಲಾಗಿದೆ. ಈ ಘಟನೆಯಲ್ಲಿ ಎರಡು ಗುಂಪಿನ ಹತ್ತಾರು ಜನ ಯುವಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆದಿದೆ.


Spread the love

LEAVE A REPLY

Please enter your comment!
Please enter your name here