ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ ಓರ್ವನಿಗೆ ಚಾರು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ. ವಿಜಯ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ಯುವಕ. ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.
Advertisement
ಗಾಯಾಳು ವಿಜಯ್ ನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಈ ಕೃತ್ಯ ನಡೆದಿದೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.