ಬೆಳಗಾವಿ:- ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ. 24 ವರ್ಷದ ಯಾಸೀರ್ ಜಾತಗಾರ ಕೊಲೆಯಾದ ಯುವಕ. ರೋಹಿತ್ ಕೊಲೆ ಮಾಡಿದ ಆರೋಪಿ ಆಗಿದ್ದು, ಪೊಲೀಸರಿಗೆ ಶರಣಾಗಿದ್ದಾನೆ.
Advertisement
ಸ್ಥಳಕ್ಕೆ ಎಸ್ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಯಾಸೀರ್ನನ್ನ ರೋಹಿತ್ ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆಯಿಂದ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.