ಬೆಂಗಳೂರು: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಅಂಧ್ರಳ್ಳಿಯ ಅನುಪಮ ಶಾಲೆ ಬಳಿ ನಡೆದಿದೆ. ಅಭಿಷೇಕ್(36) ಕೊಲೆಯಾದ ವ್ಯಕ್ತಿಯಾಗಿದ್ದು, ಬ್ಯಾಡರಹಳ್ಳಿ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕಾರ್ತಿಕ್,ಚೇತನ್ ಬಂಧಿತ ಆರೋಪಿಗಳಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ಖಡ್ಗದಿಂದ ಅಭಿಷೇಕ್ ತಲೆಗೆ ಕಾರ್ತಿಕ್ ಹೊಡೆದಿದ್ದಾನೆ. ಗಾಯಗೊಂಡು ಆಸ್ಪತ್ರೆ ಸೇರಿದ್ದ ಅಭಿಷೇಕ್, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.



