ಬೆಂಗಳೂರು:- ಎಂಡಿಎಂಎ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪ್ರಜೆಯನ್ನು ಅವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೇಬಿರಿಯಾ ಮೂಲದ ಕೌಂದ್ ಪ್ರಿನ್ಸ್ ಬಂಧಿತ ಆರೋಪಿ. ಅವಲಹಳ್ಳಿ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯಿಂದ 1.6 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆರೋಪಿಯು, ಒಂದು ತಿಂಗಳ ಹಿಂದೆಯಷ್ಟೆ ಬ್ಯುಸಿನೆಸ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ. ಈ ವೇಳೆ ದೆಹಲಿ ಮೂಲದ ಪೆಡ್ಲರ್ ಜೊತೆಗೂಡಿ ಡ್ರಗ್ಸ್ ಡೀಲ್ ಮಾಡಿಕೊಂಡಿದ್ದ. ಅದರಂತೆ ದೆಹಲಿಯಿಂದ ಡ್ರಗ್ಸ್ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ.
ಇತ್ತೀಚಿಗೆ ಈ ಪೆಡ್ಲರ್ ದೆಹಲಿ ಪೊಲೀಸರ ಬಲೆಗೆ ಬಿದ್ದಿದ್ದ. ಬಳಿಕ ಪೊಲೀಸರು, ಆತನ ಮನೆ ಶೋಧ ಮಾಡಿದರು. ಈ ವೇಳೆ ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿತ್ತು. ಕೂಡಲೇ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಇದೀಗ ಅವಲಹಳ್ಳಿ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


