ಬೆಂಗಳೂರು:- ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮೆಟ್ರೋದ ಹಳಿಗೆ ನಾಲ್ಕು ವರ್ಷದ ಮಗು ಜಿಗಿದ ಘಟನೆ ಜರುಗಿದೆ.
Advertisement
ಕೂಡಲೆ ಬಿಎಂಆರ್ಸಿಎಲ್ ಸಿಬ್ಬಂದಿ ಎರಡೂ ಮಾರ್ಗದ ರೈಲು ಸಂಚಾರ, ಹಳಿಯ ವಿದ್ಯುತ್ ಸಂಚಾರ ಸ್ಥಗಿತಗೊಳಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.
ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ ಎನ್ನಲಾಗಿದೆ.


