ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಜಗೋಪಾಲ ನಗರದಲ್ಲಿ ಕುಡುಕರ ಗ್ಯಾಂಗ್ ಪಿಎಸ್‍ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ಜರುಗಿದೆ.
ಎಸ್, ರಾಜಗೋಪಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಒಂದರ ಬಳಿ ರಾಜಗೋಪಲನಗರ ಸಬ್ ಇನ್ಸ್‌ಪೆಕ್ಟರ್ ಮುರಳಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯಪಾನ ಮಾಡುತ್ತಿದ್ದರು. ಬಾರ್ ಕ್ಲೋಸ್ ಆಗಿದ್ದರೂ ಸಹ, ಕೈನಲ್ಲಿ ಗ್ಲಾಸ್ ಹಿಡಿದು ಪುಂಡರು ಮೋಜು ಮಸ್ತಿಯಲ್ಲಿ ತೊಡಗಿದ್ದರು.
ಕಾರಿನ ವಿಂಡೋ ಗ್ಲಾಸ್ ಇಳಿಸುವಂತೆ ಪಿಎಸ್‍ಐ ಹೇಳಿದ್ದಾರೆ. ಈ ವೇಳೆ, ಏಕಾಏಕಿ ಕಾರನ್ನು ರಿವರ್ಸ್ ತೆಗೆದು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಪಿಎಸ್‍ಐ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಜಾನ್ಸನ್ ಎಂಬವನಿಗೆ ಸೇರಿರುವುದು ಎಂದು ತಿಳಿದು ಬಂದಿದೆ. ಪೊಲೀಸರು ಪುಂಡರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಒಟ್ಟಾರೆ ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಮಿತಿ ಮೀರಿದ್ದು, ಇವರ ಆಟೋಪಗಳಿಗೆ ಬ್ರೇಕ್ ಹಾಕಬೇಕಾಗಿದೆ.