HomeGadag Newsಮಾದಕ ವ್ಯಸನ ತ್ಯಜಿಸಿದರೆ ಮಾತ್ರ ಉತ್ತಮ ಬದುಕು ಸಾಧ್ಯ: ಸಿಎಂ ಡಿ.ಕೆ. ಶಿವಕುಮಾರ್

ಮಾದಕ ವ್ಯಸನ ತ್ಯಜಿಸಿದರೆ ಮಾತ್ರ ಉತ್ತಮ ಬದುಕು ಸಾಧ್ಯ: ಸಿಎಂ ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ದ್ರವ್ಯಗಳಿಂದ ದೂರ ಉಳಿಯುವುದೇ ಆರೋಗ್ಯಕರ ವ್ಯಕ್ತಿತ್ವ, ಸುಭದ್ರ ಕುಟುಂಬ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೊದಲ ಹೆಜ್ಜೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

ಅವರು, ನಗರದ ಸನ್ಮಾರ್ಗ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆನ್‌ಲೈನ್ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾದಕ ದ್ರವ್ಯ ಸೇವನೆಯನ್ನು ತ್ಯಜಿಸಿದಾಗ ಮಾತ್ರ ವ್ಯಕ್ತಿ ತನ್ನ ಕುಟುಂಬದ ಜೊತೆಗೆ ಸಮಾಜಕ್ಕೂ ಉತ್ತಮ ಬದುಕು ಕಟ್ಟಿಕೊಡಲು ಸಾಧ್ಯವಾಗುತ್ತದೆ. ಡ್ರಗ್ಸ್ ಹಾವಳಿಯನ್ನು ತಡೆಗಟ್ಟಲು ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದರೂ, ವಿದ್ಯಾರ್ಥಿಗಳು ಹಾಗೂ ಯುವಜನರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗದಗ ಪೊಲೀಸ್ ಇಲಾಖೆಯ ಆರ್‌ಎಸ್‌ಐ ಸಿ.ಎಸ್. ಕೆರೂರ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ಮತ್ತು ಯುವಜನರಲ್ಲಿ ಮಾದಕ ದ್ರವ್ಯ ಸೇವನೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು. ಕ್ಷಣಿಕ ಸುಖಕ್ಕಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನೋರ್ವ ಆರ್‌ಎಸ್‌ಐ ಚಾಂದ್ ಭಾಷಾ ಮಾತನಾಡಿ, ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿಗಳು ಸನ್ಮಾರ್ಗದಲ್ಲೇ ನಡೆದು ಸಮಾಜಕ್ಕೆ ಮಾದರಿಯಾಗಬೇಕು. ಯುವಜನರು ಡ್ರಗ್ಸ್‌ನಿಂದ ದೂರ ಉಳಿದರೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ರಾಜೇಶ್ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪುನೀತ್ ದೇಶಪಾಂಡೆ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img