ಹಾಸನ:- ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಲಾಡ್ಜ್ ನಲ್ಲಿ ಜರುಗಿದೆ.
57 ವರ್ಷದ ರಂಗಸ್ವಾಮಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು.
ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಮೂರು ವರ್ಷಗಳು ಮಾತ್ರ ಬಾಕಿ ಇತ್ತು. ರಂಗಸ್ವಾಮಿಯವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



