Homecultureಕನ್ನಡ ಸಾಹಿತ್ಯ ರಥಕ್ಕೆ ಅದ್ದೂರಿ ಸ್ವಾಗತ

ಕನ್ನಡ ಸಾಹಿತ್ಯ ರಥಕ್ಕೆ ಅದ್ದೂರಿ ಸ್ವಾಗತ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ರೋಣ : ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥೋತ್ಸವಕ್ಕೆ ತಹಸೀಲ್ದಾರ್ ನಾಗರಾಜ ಕೆ ಹಾಗೂ ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ ಸ್ವಾಗತ ಕೋರಿದರು.

ಮಂಡ್ಯದಲ್ಲಿ ಜರುಗುವ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಹಾ ರಥೋತ್ಸವವನ್ನು ತಹಸೀಲ್ದಾರ್ ನಾಗರಾಜ ಕೆ ತಾಲೂಕಾಡಳಿತದಿಂದ ರೋಣ ತಾಲೂಕಾ ಸರಹದ್ದಿನ ಸೂಡಿ ಗ್ರಾಮದಲ್ಲಿ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತ ಕೋರಿದರು. ನಂತರ ಅವರು ರಥೋತ್ಸವದೊಂದಿಗೆ ರೋಣ ಪಟ್ಟಣದ ಸಿದ್ದಾರೂಢ ಮಠಕ್ಕೆ ಆಗಮಿಸುತ್ತಿದ್ದಂತೆ ಪುರಸಭೆಯ ಮುಖ್ಯಾಧಿಕಾರಿ ರಮೇಶ ಹೊಸಮನಿ ಸ್ವಾಗತಿಸಿದರು.

ಪುರಸಭೆ ಉಪಾಧ್ಯಕ್ಷ ದುರ್ಗಪ್ಪ ಹಿರೇಮನಿ ಕನ್ನಡ ಧ್ವಜವನ್ನು ಹಿಡಿದು ಮೆರವಣಿಗೆಗೆ ಚಾಲನೆ ನೀಡಿದರು.

ಶಾಲಾ ಮಕ್ಕಳು ಸೇರಿದಂತೆ ಅಕ್ಷರದಾಸೋಹಾಧಿಕಾರಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿ ಸಂಚಾರ ಸಮಸ್ಯೆಯಾಗದಂತೆ ನಿಗಾ ವಹಿಸಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img